ಕ್ರಿಕೆಟ್

IPL 2026: KKR ವಿರುದ್ಧ GT ಗೆ 5 ವಿಕೆಟ್ ಜಯ; ಗಿಲ್ ಭರ್ಜರಿ ಬ್ಯಾಟಿಂಗ್

ಕೋಲ್ಕತಾ ನೀಡಿದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ 19.4 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನು ಗಳಿಸಿ 5 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.

IPL 2026: KKR ವಿರುದ್ಧ GT ಗೆ 5 ವಿಕೆಟ್ ಜಯ; ಗಿಲ್ ಭರ್ಜರಿ ಬ್ಯಾಟಿಂಗ್
ಕೋಲ್ಕತಾ ವಿರುದ್ಧ ಗುಜರಾತ್ ಗೆ ಭರ್ಜರಿ ಜಯ
Published On :

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಶುಕ್ರವಾರ ಗುಜರಾತ್ ನ ಅಹ್ಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೀಡಿದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ 19.4 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನು ಗಳಿಸಿ 5 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.

ಗುಜರಾತ್ ಪರ ನಾಯಕ ಶುಭ್ ಮನ್ ಗಿಲ್ 86 ರನ್ ಗಳಿಸಿ ಗೆಲುವಿನ ರೂವಾರಿಯಾದರು.

ಉಳಿದಂತೆ ಗುಜರಾತ್ ಪರ ಸಾಯಿ ಸುದರ್ಶನ್ 22, ಜಾಸ್ ಬಟ್ಲರ್ 25, ವಾಷಿಂಗ್ಟನ್ ಸುಂದರ್ 13, ಗ್ಲೇನ್ ಫಿಲಿಪ್ಸ್ 19 ಗಳಿಸಿ ಔಟಾದರು. ರಾಹುಲ್ ತೇವಾಟಿಯಾ (7) ಮತ್ತು ಶಾರುಖ್ ಖಾನ್ (3) ಗೆಲುವಿವ ಔಪಚಾರಿಕತೆ ಮುಕ್ತಾಯಗೊಳಿಸಿದರು.

ಕೋಲ್ಕತಾಗೆ ಆರಂಭಿಕ ಆಘಾತ, ಗ್ರೀನ್ ಭರ್ಜರಿ ಬ್ಯಾಟಿಂಗ್

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಶೂನ್ಯ ಸುತ್ತಿ ನಿರಾಶೆ ಮೂಡಿಸಿದರು.

ಟಿಮ್ ಸೈಫಿರಟ್ 19 ರನ್ ಗಳಿಸಿದರೆ, ರಘುವಂಶಿ 8, ರೋಮನ್ ಪವೆಲ್ 27, ಅನುಕುಲ್ ರಾಯ್ 9, ರಿಂಕು ಸಿಂಗ್ 1, ರಮನ್ ದೀಪ್ 17, ಸುನಿಲ್ ನರೇನ್ 0, ಕಾರ್ತಿಕ್ ತ್ಯಾಗಿ 6 ರನ್ ಗಳಿಸಿದರು. ಕೆಮರಾನ್ ಗ್ರೀನ್ 55 ಎಸೆತಗಳಲ್ಲಿ 7 ಬೌಂಡರಿ 4 ಸಿಕ್ಸರ್ ಸಹಿತ 79 ಕಲೆಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.