IPL 2026, RCB vs DC: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ವಾಹನ ನಿಲುಗಡೆ ಮಾಹಿತಿ...
ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರೇಕ್ಷಕರು ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಚಿನ್ನಾಭರಣಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ (IPL 2026) ಪಂದ್ಯಾವಳಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿದೆ. ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ಪೊಲೀಸ್ ಬಂದೋಬಸ್ತ್ ಮತ್ತು ಬಿಗಿ ಕ್ರಮ
ಪಂದ್ಯದ ಭದ್ರತೆಗಾಗಿ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ವಿಶೇಷವಾಗಿ ಬ್ಲ್ಯಾಕ್ ಟಿಕೆಟ್ ಮಾರಾಟ ಜಾಲವನ್ನು ಭೇದಿಸಲು 7 ವಿಶೇಷ ತಂಡಗಳನ್ನು ರಚಿಸಲಾಗಿದೆ.
ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರೇಕ್ಷಕರು ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಚಿನ್ನಾಭರಣಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ವಾಹನ ನಿಲುಗಡೆ
ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ
ಸೆಂಟ್ ಜೋಸೆಫ್ ಯುರೋಪಿಯನ್ ಶಾಲಾ ಮೈದಾನ
ಫ್ರೀಡಂ ಪಾರ್ಕ್ (MLCP ಪಾರ್ಕಿಂಗ್)
ಕಂಠೀರವ ಕ್ರೀಡಾಂಗಣ (ಹೊಸದಾಗಿ ಸೇರ್ಪಡೆ)
ಯು.ಬಿ. ಸಿಟಿ ಮತ್ತು ಗರುಡ ಮಾಲ್ ಪಾರ್ಕಿಂಗ್
ಶಿವಾಜಿನಗರ ಬಸ್ ನಿಲ್ದಾಣ (1ನೇ ಮಹಡಿ)
ವಾಹನ ನಿಲುಗಡೆ ನಿಷೇಧಿತ ರಸ್ತೆಗಳು
ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ), ಕಬ್ಬನ್ ರಸ್ತೆ, ರಾಜಭವನ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಲಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ಕಬ್ಬನ್ ಪಾರ್ಕ್ ಒಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಓಲಾ/ಉಬರ್/ಆಟೋ ಪಿಕ್-ಅಪ್ ಪಾಯಿಂಟ್
ಬಿಆರ್‌ವಿ ಮೈದಾನ (ಗೇಟ್ ನಂ. 06ರ ಬಳಿ)
ಮಾಣಿಕ್ ಶಾ ಪರೇಡ್ ಮೈದಾನ (ಗೇಟ್ ನಂ. 03ರ ಬಳಿ)
ಕ್ರೀಡಾಂಗಣದ ಪ್ರವೇಶ ದ್ವಾರಗಳ ವಿವರ
ಲಿಂಕ್ ರಸ್ತೆ ಕಡೆಯಿಂದ: ಗೇಟ್ ನಂ. 11 ರಿಂದ 17 ರವರೆಗೆ ಪ್ರವೇಶಕ್ಕೆ ಅವಕಾಶವಿದೆ.
ಕಬ್ಬನ್ ರಸ್ತೆ ಕಡೆಯಿಂದ: ಗೇಟ್ ನಂ. ಇ-1 ರಿಂದ ಇ-3 ಮತ್ತು ಇ-18, 19, 22, 23 ರ ಮೂಲಕ ಪ್ರವೇಶಿಸಬಹುದು.
ಕ್ವೀನ್ಸ್ ರಸ್ತೆ ಕಡೆಯಿಂದ: ಗೇಟ್ ನಂ. ಇ-5 ಮತ್ತು ಇ-8 ಪ್ರವೇಶಕ್ಕೆ, ಹಾಗೂ ಗೇಟ್ ನಂ. 9 ಮತ್ತು 9ಎ ನಿರ್ಗಮನಕ್ಕೆ ಮಾತ್ರ ಮೀಸಲಿದೆ.
ವಿಐಪಿ ಪ್ರವೇಶ: ಗೇಟ್ ನಂ. ಇ-10 ರ ಮೂಲಕ ಆಟಗಾರರು ಮತ್ತು ಗಣ್ಯರಿಗೆ ಅವಕಾಶ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


