IPL 2026: ಮುಂದುವರೆದ PBKS ಜೈತ್ರ ಯಾತ್ರೆ; LSG ವಿರುದ್ಧ 54 ರನ್ ಭರ್ಜರಿ ಜಯ
ನ್ಯೂ ಚಂಡಿಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ಇಂದು ನಡೆದ ಹೈ ಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಲಕ್ನೋ ತಂಡವನ್ನು 54 ರನ್ ಗಳ ಅಂತರದಲ್ಲಿ ಮಣಿಸಿತು.

ಚಂಡಿಗಢ: ಐಪಿಎಲ್ 2026ರ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಜೈತ್ರಯಾತ್ರೆ ಮುಂದುವರೆದಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ 54 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ನ್ಯೂ ಚಂಡಿಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ಇಂದು ನಡೆದ ಹೈ ಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಲಕ್ನೋ ತಂಡವನ್ನು 54 ರನ್ ಗಳ ಅಂತರದಲ್ಲಿ ಮಣಿಸಿತು.
ಮೊದಲು ಬ್ಯಾಟಿಂಗ್ ಮಾಡಿ ಪಂಜಾಬ್ ನೀಡಿದ್ದ 255 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 54 ರನ್ ಗಳ ಅಂತರದಲ್ಲಿ ಸೋಲು ಕಂಡಿತು.
ಲಕ್ನೋ ಪರ ಮಿಚ್ ಮಾರ್ಶ್ (40), ಆಯುಶ್ ಬದೋನಿ (35), ನಾಯಕ ರಿಷಬ್ ಪಂತ್ (43), ಐಡೆನ್ ಮರ್ಕ್ರಾಮ್ (42) ಲಕ್ನೋ ಇನ್ನಿಂಗ್ಸ್ ಗೆ ಜೀವ ತುಂಬಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಅಂತಿಮವಾಗಿ ಲಕ್ನೋ ತಂಡ 54 ರನ್ ಗಳ ಅಂತರದಲ್ಲಿ ಸೋಲು ಕಂಡಿತು.
ಪಂಜಾಬ್ ಪರ ಮಾರ್ಕೋ ಜೇನ್ಸನ್ 2 ವಿಕೆಟ್ ಪಡೆದರೆ, ಅರ್ಶ್ ದೀಪ್ ಸಿಂಗ್, ವೈಶಾಕ್ ವಿಜಯ್ ಮತ್ತು ಯುಜುವೇಂದ್ರ ಚಹಲ್ ತಲಾ 1 ವಿಕೆಟ್ ಪಡೆದರು.
ಈ ಜಯದೊಂದಿಗೆ ಅಂಕಪಟ್ಟಿಯಲ್ಲಿ ಪಂಜಾಬ್ ತಂಡ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದು, ತಾನಾಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಜಯಗಳಿಸಿದೆ. 1 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂಜಾಬ್ ಒಟ್ಟಾರೆ 11 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



