IPL 2026: ಪ್ರೀತಿ ಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ; Video
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.

ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದೆ. ಇದುವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು ಬೀರಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.
ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತು. ಇದು ಈ ಬಾರಿ ತಂಡದ ಅತ್ಯಧಿಕ ಸ್ಕೋರ್ ಆಗಿದೆ. ಈ ಗುರಿ ಬೆನ್ನಟ್ಟಿದ್ದ ಲಕ್ನೋ ಸೂಪರ್ ಜೈಂಟ್ಸ್ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿತು.
ಪಂದ್ಯದ ನಂತರ, ಫ್ರಾಂಚೈಸಿ ಸಹ-ಮಾಲೀಕರಾದ ಪ್ರೀತಿ ಜಿಂಟಾ, ವೇಗಿ ಅರ್ಶ್‌ದೀಪ್ ಸಿಂಗ್ ಅವರನ್ನು ಅಪ್ಪಿಕೊಳ್ಳುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರಿಂದ ತುಂಬಾ ಖುಷಿಗೊಂಡ ಅರ್ಶದೀಪ್ ಸಿಂಗ್ ಕುಣಿದು ಕುಪ್ಪಳಿಸಿದ್ದಾರೆ.
ಅರ್ಶ್ ದೀಪ್ ಸಿಂಗ್ ಪಕ್ಕದಲ್ಲೇ ನಿಂತು ಇದೆಲ್ಲಾವನ್ನು ನೋಡುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ, ಹೊಟ್ಟೆ ಉರಿದುಕೊಂಡಂತೆ ನಕ್ಕಿದ್ದಾರೆ. ಬಾಲಿವುಡ್‌ನ ಪ್ರಸಿದ್ಧ ನಟಿಯೂ ಆಗಿರುವ ಪ್ರೀತಿ ಜಿಂಟಾ ನಮ್ರತೆ ಮತ್ತು ಟೂರ್ನಿಯುದ್ದಕ್ಕೂ ಪಂಜಾಬ್ ಕಿಂಗ್ಸ್ ಆಟಗಾರರಿಗೆ ನೀಡುವ ಬೆಂಬಲದಿಂದಾಗಿ ಆಗಾಗ್ಗೆ ಪ್ರಶಂಸಿಸಲ್ಪಡುತ್ತಾರೆ.
ಪ್ರೀತಿ ಜಿಂಟಾ ಹಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



