IPL 2026, MI vs CSK: ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson; ಎಲೈಟ್ ಗ್ರೂಪ್ ಸೇರ್ಪಡೆ
ಸಿಎಸ್‌ಕೆ ತಂಡ 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ಚೆನ್ನೈನ ಈ ಬೃಹತ್ ಮೊತ್ತದಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ನಿರ್ಣಾಯಕ ಪಾತ್ರ ವಹಿಸಿದ್ದರು.

ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಇತಿಹಾಸ ನಿರ್ಮಿಸಿದ್ದಾರೆ.
ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತರೂ ಚೆನ್ನೈ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಸಿಎಸ್‌ಕೆ ತಂಡ 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ಚೆನ್ನೈನ ಈ ಬೃಹತ್ ಮೊತ್ತದಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ನಿರ್ಣಾಯಕ ಪಾತ್ರ ವಹಿಸಿದ್ದರು.
ಸಂಜು ಸ್ಯಾಮ್ಸನ್ (Sanju Samson) ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಇದು ಋತುವಿನ ಅವರ ಎರಡನೇ ಶತಕ, ಸಿಎಸ್‌ಕೆ ಪರ ಅವರ ಎರಡನೇ ಮತ್ತು ಐಪಿಎಲ್ ಇತಿಹಾಸದಲ್ಲಿ ಅವರ ಐದನೇ ಶತಕವಾಗಿದೆ.
ಸಂಜು ಕೇವಲ 54 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಸಂಜು ಅಜೇಯ 101 ಕಲೆಹಾಕಿದರು. ಅಂತೆಯೇ ಸ್ಯಾಮ್ಸನ್ ಅವರ ಶತಕವು ಐಪಿಎಲ್‌ನಲ್ಲಿ ಮುಂಬೈ ವಿರುದ್ಧ ಸಿಎಸ್‌ಕೆ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ವೈಯಕ್ತಿಕ ಶತಕವಾಗಿದೆ.
ಐಪಿಎಲ್ ನ 5ನೇ ಶತಕ
ಸಂಜುಗೆ ಇದು ಐಪಿಎಲ್ ನ 5ನೇ ಶತಕವಾಗಿದ್ದು, ಈ ಮೂಲಕ ಸಂಜು ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನಕ್ಕೇರಿದ್ದಾರೆ.
ಎಲೈಟ್ ಗ್ರೂಪ್ ಸೇರ್ಪಡೆ
ಈ ಶತಕದೊಂದಿಗೆ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿದ್ದಾರೆ. ಸಂಜು ಅಲ್ಲದೆ, ರುತುರಾಜ್ ಗಾಯಕ್ವಾಡ್, ಮುರಳಿ ವಿಜಯ್ ಮತ್ತು ಶೇನ್ ವ್ಯಾಟ್ಸನ್ ಕೂಡ ಸಿಎಸ್‌ಕೆ ಪರ ತಲಾ ಎರಡು ಶತಕಗಳನ್ನು ಬಾರಿಸಿದ್ದಾರೆ. ಆದಾಗ್ಯೂ, ಇನ್ನಿಂಗ್ಸ್ ವಿಷಯದಲ್ಲಿ ಸಂಜು ಸ್ಯಾಮ್ಸನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಅತಿ ಹೆಚ್ಚು ಟಿ20 ಶತಕ
ಸಂಜು ಸ್ಯಾಮ್ಸನ್ ಇಂದಿನ ಶತಕದೊಂದಿಗೆ ಭಾರತೀಯರಲ್ಲಿ ಟಿ20ಗಳಲ್ಲಿ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ತಲಾ 9 ಶತಕಗಳನ್ನು ಸಿಡಿಸಿರುವ ವಿರಾಟ್ ಕೊಹ್ಲಿ ಮತ್ತು ಅಭಿಷೇಕ್ ಶರ್ಮಾ ಜಂಟಿ ಅಗ್ರ ಸ್ಥಾನದಲ್ಲಿದ್ದಾರೆ. ಅಂತೆಯೇ ತಲಾ 8 ಶತಕಗಳನ್ನು ಸಿಡಿಸಿರುವ ರೋಹಿತ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳು
ಅಂತೆಯೇ ಐಪಿಎಲ್ ನಲ್ಲಿ ಇದು ಸಂಜುಗೆ ಐದನೇ ಶತಕವಾಗಿದ್ದು, ಆ ಮೂಲಕ ಐಪಿಎಲ್ ನಲ್ಲಿ ಅತೀ ಹೆಚ್ಚು ಶತಕಗಳನ್ನು ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಸಂಜು ಜಂಟಿ 4ನೇ ಸ್ಥಾನಕ್ಕೇರಿದ್ದಾರೆ.
ಈ ಪಟ್ಟಿಯಲ್ಲಿ ಒಟ್ಟು 8 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದು, 7 ಶತಕಗಳೊಂದಿಗೆ ಜಾಸ್ ಬಟ್ಲರ್ 2, 6 ಶತಕಗಳಿಸಿರುವ ಕ್ರಿಸ್ ಗೇಯ್ಲ್ 3, ತಲಾ 5 ಶತಕಗಳನ್ನು ಸಿಡಿಸಿರುವ ಕೆಎಲ್ ರಾಹುಲ್ ಮತ್ತು ಸಂಜು ಸ್ಯಾಮ್ಸನ್ ಜಂಟಿ 4ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



