ಕ್ರಿಕೆಟ್

IPL 2026: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್; RR ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

IPL 2026: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್; RR ವಿರುದ್ಧ ಗೆದ್ದು ಬೀಗಿದ ಹೈದರಾಬಾದ್
ಇಶಾನ್ ಕಿಶನ್
Published On :

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 36ನೇ ಪಂದ್ಯದಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ರೋಚಕ ಗೆಲುವು ಸಾಧಿಸಿದೆ.

ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿ(103) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು.

ರಾಜಸ್ಥಾನ ರಾಯಲ್ಸ್ ತಂಡದ ಪರ ವೈಭವ್ ಸೂರ್ಯವಂಶಿ ಅವರು 37 ಎಸೆತಗಳಲ್ಲಿ 103 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಗೆಲುವಿಗೆ 229 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ, ಅಭಿಷೇಕ್ ಶರ್ಮಾ(57) ಇಶಾನ್ ಕಿಶನ್ ಅವರ ಭರ್ಜರಿ ಅರ್ಧ ಶತಕಗಳ ನೆರವಿನಿಂದ 18.3 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸುವ ಮೂಲಕ ಆರ್ ಆರ್ ವಿರುದ್ಧ ಐದು ವಿಕೆಟ್ ಗಳ ಗೆಲುವು ಸಾಧಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.