IPL 2026: ವೈಭವ್ ಸೂರ್ಯವಂಶಿ ಸಿಕ್ಸರ್ಗಳ ಸುರಿಮಳೆ; ವೇಗದ ಶತಕ ಸಿಡಿಸಿ ದಾಖಲೆ ಬರೆದ 15ರ ಪೋರ!
15 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿ 2026ರ ಐಪಿಎಲ್ ಸೀಸನ್ ನಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದಾರೆ.
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 36ನೇ ಪಂದ್ಯದಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ.
15 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿ 2026ರ ಐಪಿಎಲ್ ಸೀಸನ್ ನಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದಾರೆ.
ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ ವೈಭವ್ ಸೂರ್ಯವಂಶಿ ಮೊದಲ ಓವರ್ನಲ್ಲೇ ಸಿಕ್ಸರ್ಗಳ ಮಳೆ ಸುರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್‌ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು.
ಈ ಹಿಂದೆ ಎಸ್ಆರ್ ಎಚ್ ವಿರುದ್ಧದ ಮೊದಲ ಪಂದ್ಯದಲ್ಲಿ ಪ್ರಫುಲ್ ಹಿಂಗೆ ಅವರ ಮೊದಲ ಬಾಲ್ಗೆ ಔಟ್ ಆಗಿದ್ದ ವೈಭವ್ ಸೂರ್ಯವಂಶಿ ಇಂದು ಅದೇ ಬೌಲರ್ಗೆ ಓವರ್ ಗೆ ನಾಲ್ಕು ಸಿಕ್ಸರ್ ಬಾರಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
ಹಿಂದಿನ ಪಂದ್ಯದಲ್ಲಿ ವೈಭವ್ ಅವರನ್ನು ಔಟ್ ಮಾಡುವ ಮೂಲಕ ಸುದ್ದಿ ಮಾಡಿದ್ದ ಪ್ರಫುಲ್ ಹಿಂಗೆ, ಈ ಬಾರಿ ಯುವ ಬ್ಯಾಟ್ಸ್‌ಮನ್ ವಿರುದ್ಧ ಸಾಕಷ್ಟು ದುಬಾರಿಯಾಗಿ ಪರಿಣಮಿಸಿದರು. ವೈಭವ್ ಸೂರ್ಯವಂಶಿ ಕೇವಲ ಐದು ಎಸೆತಗಳಲ್ಲಿ 24 ರನ್ ಚಚ್ಚಿದರು. 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್ ಸಹಿತ 103 ರನ್ ಗಳಿಸುವ ಮೂಲಕ ಐಪಿಎಲ್ ನಲ್ಲಿ ಎರಡನೇ ಅತ್ಯಂತ ವೇಗದ ಶತಕ ದಾಖಲಿಸಿದರು.
ಐಪಿಎಲ್ ಇತಿಹಾಸದಲ್ಲಿ ಒಬ್ಬ ಬ್ಯಾಟ್ಸ್‌ಮನ್ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದು ಇದೇ ಮೊದಲು. ವೈಭವ್ ಸೂರ್ಯವಂಶಿಗಿಂತ ಮೊದಲು ಯಾವುದೇ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಿರಲಿಲ್ಲ. ಇದಕ್ಕೂ ಮೊದಲು, 2009 ರಲ್ಲಿ, ನಮನ್ ಓಜಾ ಕೆಕೆಆರ್ ವಿರುದ್ಧದ ಮೊದಲ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


