ಆಸಿಸ್ ವಿರುದ್ಧ ಭರ್ಜರಿ ಜಯ: WTC Final Raceನಲ್ಲಿ 4ನೇ ಸ್ಥಾನಕ್ಕೆ ಜಿಗಿದ ಬಾಂಗ್ಲಾದೇಶ; ಭಾರತದ ಪರಿಸ್ಥಿತಿ ಏನು?
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 198 ರನ್‌ಗಳಿಗೆ ಆಲೌಟ್ ಮಾಡಿದ್ದ ಬಾಂಗ್ಲಾದೇಶ ಪಂದ್ಯದುದ್ದಕ್ಕೂ ಮೇಲುಗೈ ಸಾಧಿಸಿತ್ತು.

ಡಾರ್ವಿನ್: ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದ ಬಾಂಗ್ಲಾದೇಶ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ರೇಸ್ ಪಟ್ಟಿಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ.
ಹೌದು.. ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶಗಳಲ್ಲಿ ಒಂದನ್ನು ದಾಖಲಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 198 ರನ್‌ಗಳಿಗೆ ಆಲೌಟ್ ಮಾಡಿದ್ದ ಬಾಂಗ್ಲಾದೇಶ ಪಂದ್ಯದುದ್ದಕ್ಕೂ ಮೇಲುಗೈ ಸಾಧಿಸಿತ್ತು.
ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು 284 ರನ್‌ಗಳಿಗೆ ಕಟ್ಟಿಹಾಕಿದ ಪ್ರವಾಸಿ ತಂಡಕ್ಕೆ ಗೆಲುವಿಗಾಗಿ ಕೇವಲ 57 ರನ್‌ಗಳ ಗುರಿ ಎದುರಾಯಿತು.
ನಾಲ್ಕನೇ ದಿನದ ಎರಡನೇ ಅವಧಿಯಲ್ಲಿ ಬಾಂಗ್ಲಾದೇಶ ಯಾವುದೇ ಒತ್ತಡಕ್ಕೆ ಒಳಗಾಗದೆ ಗುರಿಯನ್ನು ಕೇವಲ ಒಂದು ವಿಕೆಟ್ ಕಳೆದುಕೊಂಡು ಬೆನ್ನಟ್ಟಿ ಐತಿಹಾಸಿಕ ಗೆಲುವು ಸಾಧಿಸಿತು.
ಆಸೀಸ್‌ಗೆ ತಲೆನೋವಾದ ಬಾಂಗ್ಲಾ ಬೌಲರ್‌ಗಳು
ಪಂದ್ಯದ ಆರಂಭದಿಂದಲೇ ಬಾಂಗ್ಲಾದೇಶದ ಬೌಲರ್‌ಗಳು ಆಸ್ಟ್ರೇಲಿಯಾ ಬ್ಯಾಟರ್‌ಗಳ ಮೇಲೆ ನಿರಂತರ ಒತ್ತಡ ಹೇರಿದರು. ಪಂದ್ಯದಲ್ಲಿ ಬಾಂಗ್ಲಾದೇಶವೇ ಗೆಲ್ಲುವ ಫೇವರಿಟ್ ಎಂಬ ವಾತಾವರಣ ನಿರ್ಮಾಣವಾಗಿತ್ತು.
ನಾಲ್ಕನೇ ದಿನ ಊಟದ ವಿರಾಮದ ಬಳಿಕ ಕ್ಯಾಮೆರಾನ್ ಗ್ರೀನ್ 104 ರನ್ ಗಳಿಸಿ ತಮ್ಮ ಟೆಸ್ಟ್ ವೃತ್ತಿಜೀವನದ ಮೂರನೇ ಶತಕ ದಾಖಲಿಸಿದರೂ, ಅವರ ಏಕಾಂಗಿ ಹೋರಾಟ ಆಸ್ಟ್ರೇಲಿಯಾಗೆ ಸವಾಲಿನ ಮೊತ್ತ ನೀಡಲು ಸಾಕಾಗಲಿಲ್ಲ.
ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭದಲ್ಲೇ ಎರಡನೇ ಓವರ್‌ನಲ್ಲಿ ಒಂದು ವಿಕೆಟ್ ಕಳೆದುಕೊಂಡರೂ, ಪಂದ್ಯ ತನ್ನ ನಿಯಂತ್ರಣದಲ್ಲಿದೆ ಎಂಬ ವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ಅಂತಿಮವಾಗಿ 57 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿ ಗೆಲುವಿನ ನಗೆ ಬೀರಿತು. ಇದು ಬಾಂಗ್ಲಾದೇಶದ ಕ್ರಿಕೆಟ್ ಇತಿಹಾಸದಲ್ಲಿ ಸದಾಕಾಲ ಸ್ಮರಣೀಯವಾಗಿರುವ ಕ್ಷಣವಾಗಿ ದಾಖಲಾಗಿದೆ.
WTC ಅಂಕಪಟ್ಟಿಯಲ್ಲಿ ಬಾಂಗ್ಲಾದೇಶಕ್ಕೆ ಭರ್ಜರಿ ಜಿಗಿತ
ಈ ಐತಿಹಾಸಿಕ ಗೆಲುವಿನೊಂದಿಗೆ ಬಾಂಗ್ಲಾದೇಶ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ತಂಡದ ಪಾಯಿಂಟ್ ಶೇಕಡಾವಾರು (PCT) 58.33ರಿಂದ 66.67ಕ್ಕೆ ಏರಿಕೆಯಾಗಿದೆ. WTC 2025-27 ಅಭಿಯಾನದಲ್ಲಿ ಎರಡನೇ ಸೋಲು ಕಂಡಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಉಳಿದಿದೆ.

ಆಫ್ರಿಕಾ-ಆಸಿಸ್ ತೀವ್ರ ಪೈಪೋಟಿ
ಇನ್ನು ಈ ಪಂದ್ಯದ ಸೋಲಿನ ಬಳಿಕ WTC ಅಂಕಪಟ್ಟಿಯಲ್ಲಿ ಆಸಿಸ್ ಪಾರುಪತ್ಯಕ್ಕೆ ಅಂತ್ಯ ಬೀಳುವ ಭೀತಿ ಎದುರಾಗಿದೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾಕ್ಕಿಂತ ಅದರ PCT ಅಂತರ ತೀರಾ ಕಡಿಮೆಯಾಗಿದೆ. ಆಸ್ಟ್ರೇಲಿಯಾದ PCT 77.77, ದಕ್ಷಿಣ ಆಫ್ರಿಕಾದದ್ದು 75.00. ನ್ಯೂಜಿಲೆಂಡ್ 72.22 PCTಯೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 66.67 PCTಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಭಾರತಕ್ಕೂ ಕೊಂಚ ನೆಮ್ಮದಿ
ಬಾಂಗ್ಲಾದೇಶದ ಈ ಗೆಲುವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಭಾರತದ ಆಸೆಗೂ ಕೊಂಚ ಬಲ ನೀಡಿದೆ. ಪ್ರಸ್ತುತ ಭಾರತ 48.15 PCTಯೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಸೆಣಸಾಡುತ್ತಿದೆ.
WTC ಫೈನಲ್ ರೇಸ್‌ನಲ್ಲಿ ಉಳಿಯಬೇಕಾದರೆ, ತನ್ನ ಉಳಿದ 9 ಪಂದ್ಯಗಳಲ್ಲಿ ಕನಿಷ್ಠ 7 ಪಂದ್ಯಗಳನ್ನು ಗೆಲ್ಲಬೇಕಾದ ಅಗತ್ಯ ಭಾರತಕ್ಕಿದೆ. ಹೀಗಾಗಿ ಬಾಂಗ್ಲಾದೇಶದ ಈ ಐತಿಹಾಸಿಕ ಗೆಲುವು ಕೇವಲ ಆಸ್ಟ್ರೇಲಿಯಾಕ್ಕೆ ನೀಡಿದ ಆಘಾತವಷ್ಟೇ ಅಲ್ಲ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



