ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!
ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಮೊದಲ ಪಂದ್ಯದಲ್ಲೇ ಭಾರತ ಮೇಲುಗೈ ಸಾಧಿಸಿದೆ. ನಾಲ್ಕನೇ ದಿನ ಟೀಂ ಇಂಡಿಯಾ ಶ್ರೀಲಂಕಾಗೆ 372 ರನ್ ಗಳ ಟಾರ್ಗೆಟ್ ನೀಡಲಾಗಿತ್ತು.

ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಮೊದಲ ಪಂದ್ಯದಲ್ಲೇ ಭಾರತ ಮೇಲುಗೈ ಸಾಧಿಸಿದೆ. ನಾಲ್ಕನೇ ದಿನ ಟೀಂ ಇಂಡಿಯಾ ಶ್ರೀಲಂಕಾಗೆ 372 ರನ್ ಗಳ ಟಾರ್ಗೆಟ್ ನೀಡಲಾಗಿತ್ತು. ಈ ಗುರಿ ಬೆನ್ನಟ್ಟಿದ ಲಂಕಾ ತಂಡ 84 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಇನ್ನು ಲಂಕಾ ಬ್ಯಾಟರ್ ಗಳು ಪರದಾಡುವಂತೆ ಮಾಡಿದ್ದು ಮಾನವ್ ಸುತಾರ್. ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದ ಸುತಾರ್ ಎರಡನೇ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಪಡೆದಿದ್ದಾರೆ. ಪಸಿಂದು ಸೂರ್ಯಬಂಡಾರ ಅವರ ವಿಕೆಟ್ ಪಡೆಯುವ ಮೂಲಕ ಮಾನವ್ ಸುತಾರ್ ದಾಖಲೆಯೊಂದನ್ನು ಬರೆದಿದ್ದಾರೆ.
ಶ್ರೀಲಂಕಾ ಯುವ ಆಟಗಾರ ಪಸಿಂದು ಸೂರ್ಯಬಂಡಾರ ಅವರಿಗೆ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಬದಲಿ ಆಟಗಾರನಾಗಿ ಟೆಸ್ಟ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿತ್ತು. ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಬಂದ ಸೂರ್ಯಬಂಡಾರ ಅವರನ್ನು ಮೊದಲ ಎಸೆತದಲ್ಲೇ ಮಾನವ್ ಸುತಾರ್ ಗೋಲ್ಡನ್ ಡಕೌಟ್ ಮಾಡಿದರು. ಈ ಮೂಲಕ 32 ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
1994ರಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕ್ಯಾಮರೂನ್ ಕಫಿಯನ್ನು ತಮ್ಮ ಮೊದಲ ಎಸೆತದಲ್ಲೇ ಔಟ್ ಮಾಡುವ ಮೂಲಕ ಕನ್ನಡಿಗ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು. ಮತ್ತೊಂದೆಡೆ, ಕಳೆದ 10 ವರ್ಷಗಳಲ್ಲಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆದ ಮೊದಲ ಶ್ರೀಲಂಕಾದ ಬ್ಯಾಟ್ಸ್‌ಮನ್ ಎಂಬ ಬೇಡದ ದಾಖಲೆಯನ್ನು ಪಸಿಂದು ಸೂರ್ಯಬಂಡಾರ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



