ಕ್ರಿಕೆಟ್

ಭಾರತ ವಿರುದ್ಧದ ಪಂದ್ಯದ ವೇಳೆ ನೀತಿ ಸಂಹಿತೆ ಉಲ್ಲಂಘನೆ; ಶ್ರೀಲಂಕಾದ ಸ್ಪಿನ್ನರ್ ಪ್ರಭಾತ್ ಜಯಸೂರ್ಯಗೆ ICC ವಾಗ್ದಂಡನೆ!

ಜಯಸೂರ್ಯ ಈ ತಪ್ಪನ್ನು ಒಪ್ಪಿಕೊಂಡರು ಮತ್ತು ಪಂದ್ಯದ ರೆಫರಿ ಆಂಡಿ ಪೈಕ್ರಾಫ್ಟ್ ಸೂಚಿಸಿದ ಶಿಸ್ತು ಕ್ರಮಗಳನ್ನು ಸ್ವೀಕರಿಸಿದರು.

ಭಾರತ ವಿರುದ್ಧದ ಪಂದ್ಯದ ವೇಳೆ ನೀತಿ ಸಂಹಿತೆ ಉಲ್ಲಂಘನೆ; ಶ್ರೀಲಂಕಾದ ಸ್ಪಿನ್ನರ್ ಪ್ರಭಾತ್ ಜಯಸೂರ್ಯಗೆ ICC ವಾಗ್ದಂಡನೆ!
ಪ್ರಭಾತ್ ಜಯಸೂರ್ಯ
Published On :

ದುಬೈ: ಕೊಲಂಬೋದಲ್ಲಿ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಐಸಿಸಿ (ICC) ನೀತಿ ಸಂಹಿತೆಯನ್ನು ಉಲ್ಲಂಘಿಸಿದಕ್ಕಾಗಿ ಶ್ರೀಲಂಕಾದ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಅವರಿಗೆ ಮಂಗಳವಾರ ಎಚ್ಚರಿಕೆ ನೀಡಲಾಗಿದ್ದು, ಒಂದು 'ಡಿಮೆರಿಟ್ ಪಾಯಿಂಟ್' ವಿಧಿಸಲಾಗಿದೆ.

'ಅಂತರರಾಷ್ಟ್ರೀಯ ಪಂದ್ಯದ ವೇಳೆ ಕ್ರಿಕೆಟ್ ಉಪಕರಣಗಳು ಅಥವಾ ಉಡುಪುಗಳು, ಮೈದಾನದ ಉಪಕರಣಗಳು ಅಥವಾ ಅಳವಡಿಕೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಅಥವಾ ಹಾನಿಗೊಳಿಸುವುದಕ್ಕೆ ಸಂಬಂಧಿಸಿದ ಐಸಿಸಿ ನೀತಿ ಸಂಹಿತೆಯ (ಆಟಗಾರರು ಮತ್ತು ಆಟಗಾರರ ಸಹಾಯಕ ಸಿಬ್ಬಂದಿಗಾಗಿ) ವಿಧಿ 2.2 ಅನ್ನು ಜಯಸೂರ್ಯ ಉಲ್ಲಂಘಿಸಿರುವುದು ಕಂಡುಬಂದಿದೆ' ಎಂದು ಐಸಿಸಿ ತಿಳಿಸಿದೆ.

24 ತಿಂಗಳ ಅವಧಿಯಲ್ಲಿ ಎಡಗೈ ಸ್ಪಿನ್ನರ್ ಮಾಡಿದ ಮೊದಲ ಅಪರಾಧ ಇದಾಗಿದೆ ಎಂದು ಆಡಳಿತ ಮಂಡಳಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

'ಭಾರತದ ವಿರುದ್ಧದ ಎರಡನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದ ವೇಳೆ ನಡೆದ ಘಟನೆಗಾಗಿ ಶಿಸ್ತು ಕ್ರಮಕ್ಕೆ ಒಳಗಾದ ಮೂರನೇ ಆಟಗಾರ ಶ್ರೀಲಂಕಾದ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಆಗಿದ್ದಾರೆ; ತಮ್ಮ ತಂಡದ ಮೊದಲ ಇನಿಂಗ್ಸ್‌ನಲ್ಲಿ ಔಟ್ ಆದ ನಂತರ ಅವರಿಗೆ ಅಧಿಕೃತವಾಗಿ ಎಚ್ಚರಿಕೆ ನೀಡಲಾಗಿದೆ' ಎಂದು ಐಸಿಸಿ ತಿಳಿಸಿದೆ.

ಎರಡನೇ ದಿನದಾಟದ ಅಂತಿಮ ಎಸೆತದಲ್ಲಿ ಭಾರತದ ಸ್ಪಿನ್ನರ್ ಮಾನವ್ ಸುತಾರ್ ಅವರ ಬೌಲಿಂಗ್‌ನಲ್ಲಿ 'ಲೆಗ್-ಬಿಫೋರ್' ಆಗಿ ಔಟ್ ಆದ ಜಯಸೂರ್ಯ, ಡ್ರೆಸ್ಸಿಂಗ್ ರೂಮ್‌ಗೆ ಮರಳುವಾಗ ತಮ್ಮ ಬ್ಯಾಟ್‌ನಿಂದ ಬೌಂಡರಿ ವೇಡ್ಜ್‌ಗಳಿಗೆ (ಗಡಿ ರೇಖೆಯ ಬಳಿ ಇರುವ ಫಲಕಗಳು) ಹೊಡೆದರು.

ಜಯಸೂರ್ಯ ಈ ತಪ್ಪನ್ನು ಒಪ್ಪಿಕೊಂಡರು ಮತ್ತು ಪಂದ್ಯದ ರೆಫರಿ ಆಂಡಿ ಪೈಕ್ರಾಫ್ಟ್ ಸೂಚಿಸಿದ ಶಿಸ್ತು ಕ್ರಮಗಳನ್ನು ಸ್ವೀಕರಿಸಿದರು.

ಇದಕ್ಕೂ ಮುನ್ನ, ಕೊಲಂಬೊ ಟೆಸ್ಟ್‌ನ ಮೊದಲ ದಿನದಂದು ಮೈದಾನದಲ್ಲಿ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಶ್ರೀಲಂಕಾದ ವೇಗದ ಬೌಲರ್ ಅಸಿತಾ ಫರ್ನಾಂಡೋ ನಡುವೆ ನಡೆದ ಮಾತಿನ ಚಕಮಕಿಗಾಗಿ ಉಭಯ ಆಟಗಾರರಿಗೆ ತಲಾ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಯಿತು ಹಾಗೂ ಅವರ ಪಂದ್ಯದ ಶುಲ್ಕದ ಶೇ 25ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.