Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟಾಬಯಲು!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ.

ನವದೆಹಲಿ: ಬಾಂಗ್ಲಾದೇಶದ ಮುಖವಾಡ ಈಗ ಕಳಚಿ ಬಿದ್ದಿದೆ.T20 ವಿಶ್ವಕಪ್ 2026 ರಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮೌನವಾಗಿ ಕೈಜೋಡಿಸಿವೆ.
ಕೊಲಂಬೊದಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಮೂಲಕ ಟಿ-20 ವಿಶ್ವಕಪ್ ನಲ್ಲಿ ಬಾಂಗ್ಲಾದೇಶವನ್ನು ಬಹಿಷ್ಕರಿಸಿರುವುದನ್ನು ಬೆಂಬಲಿಸಿದ್ದಕ್ಕಾಗಿ ಆ ದೇಶದ ಕ್ರೀಡಾ ಸಲಹೆಗಾರ, ಆಸಿಫ್ ನಜ್ರುಲ್ ಇಸ್ಲಾಮಾಬಾದ್ಗೆ ಧನ್ಯವಾದ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ತಮ್ಮ ದೇಶ ನಿರ್ಧರಿಸಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ಬೆನ್ನಲ್ಲೇ ಆಸಿಫ್ ನಜ್ರುಲ್ ಈ ಪೋಸ್ಟ್ ಮಾಡಿದ್ದಾರೆ.
2024ರ ಜುಲೈ-ಆಗಸ್ಟ್ ನಲ್ಲಿ ನಡೆದ ದಂಗೆಯಲ್ಲಿ ಶೇಖ್ ಹಸೀನಾ ಅವರ ಸರ್ಕಾರ ಪದಚ್ಯುತಿ ನಂತರ ಅಸ್ತಿತ್ವಕ್ಕೆ ಬಂದಿರುವ ಮಧ್ಯಂತರ ಆಡಳಿತದಲ್ಲಿ ನಜ್ರುಲ್ ಕ್ರೀಡಾ ಸಚಿವರಾಗಿದ್ದಾರೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ನೆಲದಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದ ನಂತರ ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತ ವಿರುದ್ಧದ ಪಂದ್ಯವನ್ನು ನಿರ್ಬಂಧಿಸುವಂತೆ ಪಾಕಿಸ್ತಾನ ಸರ್ಕಾರ ಅಲ್ಲಿನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ತಿಳಿಸಿದೆ.
ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾರಕತದ ವಿರುದ್ಧದ ಪಂದ್ಯವನ್ನು ನಾವು ಆಡಲ್ಲ. ಏಕೆಂದರೆ ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಇರಬಾರದು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ಬೆನ್ನಲ್ಲೇ ನಜ್ರುಲ್ ಧನ್ಯವಾದ ಸಲ್ಲಿಸಿದದಾರೆ. ಇಸ್ಲಾಮಾಬಾದ್ನಲ್ಲಿ ನಡೆದ ಸರ್ಕಾರಿ ಸಭೆಯಲ್ಲಿ ಷರೀಫ್ ಹೇಳಿಕೆ ನೀಡಿದ್ದು, ಟಿ20 ವಿಶ್ವಕಪ್ನಲ್ಲಿ ನಾವು ಭಾರತದ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ.
ನಾವು ಸಂಪೂರ್ಣವಾಗಿ ಬಾಂಗ್ಲಾದೇಶದ ಪರವಾಗಿ ನಿಲ್ಲಬೇಕು.ಇದು ಅತ್ಯಂತ ಸೂಕ್ತವಾದ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ನಾವು ಬಾಂಗ್ಲಾದೇಶದೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ. ಷರೀಫ್ ಹೇಳಿಕೆ T20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಹಿಂದಿನ ಕಾರಣವನ್ನು ಪಾಕಿಸ್ತಾನದ ಸರ್ಕಾರ ಅಥವಾ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪರವಾಗಿ ಬಂದ ಮೊದಲ ಅಧಿಕೃತ ಹೇಳಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



