T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!
ಪಂದ್ಯದಲ್ಲಿ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಜೊತೆ ಹೊಸದಾಗಿ ಮಾತುಕತೆ ಆರಂಭಿಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ ಕಾಣುತ್ತಿದೆ. ಫೆಬ್ರವರಿ 15 ರಂದು ನಡೆಯಲಿರುವ ಹೈವೋಲ್ಜೇಜ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪಂದ್ಯದಲ್ಲಿ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಜೊತೆ ಹೊಸದಾಗಿ ಮಾತುಕತೆ ಆರಂಭಿಸಿದೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಬಹಿಷ್ಕಾರ ನಿರ್ಧಾರವನ್ನು ಆ ದೇಶದ ಸರ್ಕಾರ ಪ್ರಕಟಿಸಿದ ಬಳಿಕ ಪಿಸಿಬಿ ಇಕ್ಕಟ್ಟಿಗೆ ಸಿಲುಕಿತ್ತು. ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ಬಗ್ಗೆ ತನ್ನ ನಿರ್ಧಾರದ ಬಗ್ಗೆ ಸೂಕ್ತ ಕಾರಣಗಳೊಂದಿಗೆ ಸ್ಪಷ್ಟನೆ ನೀಡುವಂತೆ ಐಸಿಸಿ ತಾಕೀತು ಮಾಡಿದ ನಂತರ ಈ ಹಠಾತ್ ಬದಲಾವಣೆಯಾಗಿದೆ.
ಸದ್ಯದ ಬಿಕ್ಕಟ್ಟು ಶಮನಕ್ಕೆ PCB ಅಧಿಕಾರಿಗಳೊಂದಿಗೆ ನಿರ್ಣಾಯಕ ಸಭೆ ನಡೆಸಲು BCB ಅಧ್ಯಕ್ಷ ಅಮಿನುಲ್ ಇಸ್ಲಾಂ ಬುಲ್‌ಬುಲ್ ಭಾನುವಾರ ಲಾಹೋರ್ ತಲುಪಿದ್ದಾರೆ. ಅಲ್ಲದೇ, ಇಬ್ಬರು ICC ಅಧಿಕಾರಿಗಳು ಸಹ BCB ಮತ್ತು PCB ಇಬ್ಬರನ್ನೊಳಗೊಂಡ ಸಭೆಗಾಗಿ ಲಾಹೋರ್‌ಗೆ ಪ್ರಯಾಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಪಾಕಿಸ್ತಾನ, ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡರೆ ಭಾರಿ ದಂಡ, ಪಾಯಿಂಟ್ ಕಡಿತ, ಸಂಭಾವ್ಯ ಸದಸ್ಯತ್ಯ ಅಮಾನತು, ಮುಂಬರುವ ಅಂತಾರಾಷ್ಟ್ರೀಯ ಟೂರ್ನಿಗಳ ಪ್ರಸಾರದ ಹಕ್ಕು ಕಡಿತ ಸೇರಿದಂತೆ ಅನೇಕ ನಿರ್ಬಂಧಗಳನ್ನು ಎದುರಿಸಬೇಕಾದ ಎಚ್ಚರಿಕೆಯನ್ನು ಐಸಿಸಿ ಈಗಾಗಲೇ ಪತ್ರದ ಮೂಲಕ ನೀಡಿದೆ ಎನ್ನಲಾಗಿದೆ.
ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಈಗಾಗಲೇ T20 ವಿಶ್ವಕಪ್ ಅಭಿಯಾನವನ್ನು ಆರಂಭಿಸಿವೆ. ಕೊಲಂಬೊದಲ್ಲಿ ನಡೆದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ ಮೂರು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭೀತಿಯಿಂದ ಹೊರಬಂದಿತು. ಮತ್ತೊಂದೆಡೆ, ಹಿಂದಿನ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದಿದ್ದ ಅಮೆರಿಕದ ವಿರುದ್ಧ ಭಾರತ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



