Ranji Trophy: ಕೆಎಲ್ ರಾಹುಲ್- ಸ್ಮರಣ್ ರವಿಚಂದ್ರನ್ ಭರ್ಜರಿ ಜೊತೆಯಾಟ; ಮುಂಬೈ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದ ಕರ್ನಾಟಕ!
ಈ ಗೆಲುವಿನಿಂದ ಕರ್ನಾಟಕ ತಂಡವು ಮುಂದಿನ ವಾರ ಬೆಂಗಳೂರಿನಲ್ಲಿ ನಡೆಯಲಿರುವ ಸೆಮಿಫೈನಲ್‌ನಲ್ಲಿ ಉತ್ತರಾಖಂಡ ತಂಡವನ್ನು ಎದುರಿಸಲಿದೆ.

ಮುಂಬೈ: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡವು 42 ಬಾರಿಯ ಚಾಂಪಿಯನ್ ಮುಂಬೈ ವಿರುದ್ಧ ನಾಲ್ಕು ವಿಕೆಟ್‌ಗಳ ಅದ್ಭುತ ಜಯ ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಪ್ರವೇಶಿಸಿದೆ.
ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಬಿಕೆಸಿ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ರಾಹುಲ್ 182 ಎಸೆತಗಳಲ್ಲಿ 14 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 130 ರನ್ ಗಳಿಸಿ ಕರ್ನಾಟಕದ ಗೆಲುವಿನ ರೂವಾರಿ ಎನಿಸಿಕೊಂಡರು. ಪ್ರವಾಸಿ ತಂಡವು 325 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿತ್ತು.
ಈ ಗೆಲುವಿನಿಂದ ಕರ್ನಾಟಕ ತಂಡವು ಮುಂದಿನ ವಾರ ಬೆಂಗಳೂರಿನಲ್ಲಿ ನಡೆಯಲಿರುವ ಸೆಮಿಫೈನಲ್‌ನಲ್ಲಿ ಉತ್ತರಾಖಂಡ ತಂಡವನ್ನು ಎದುರಿಸಲಿದೆ.
ಪಂದ್ಯದ ಕೊನೆಯ ದಿನದಂದು ಕನ್ನಡಿಗ ಕೆಎಲ್ ರಾಹುಲ್ ಮತ್ತು ರವಿಚಂದ್ರನ್ ಸ್ಮರಣ್ ಅವರಿಂದ ಉತ್ತಮ ಜೊತೆಯಾಟ ಮೂಡಿಬಂತು. ಈ ಜೋಡಿ ನಾಲ್ಕನೇ ವಿಕೆಟ್ ನಷ್ಟಕ್ಕೆ 147 ರನ್‌ಗಳ ಜೊತೆಯಾಟವಾಡಿತು.
ಸ್ಮರಣ್ 123 ಎಸೆತಗಳಲ್ಲಿ 11 ಬೌಂಡರಿ ಸಹಿತ 83 ರನ್ ಗಳಿಸಿ ಔಟಾಗದೆ ಉಳಿದರು. ರಾಹುಲ್ ಅವರ ಶತಕದ ನೆರವಿನಿಂದ, ಊಟದ ವಿರಾಮದ ವೇಳೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದಿರುವ ಕರ್ನಾಟಕ ಮೂರು ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತ್ತು. ಆದರೆ, ಊಟದ ನಂತರ ತುಷಾರ್ ದೇಶಪಾಂಡೆ ಎಸೆತದಲ್ಲಿ ರಾಹುಲ್ ಔಟ್ ಆದರು.
ಮುಂಬೈ ತಂಡದ ಬೌಲರ್‌ಗಳಾದ ತುಷಾರ್ ದೇಶಪಾಂಡೆ ಮತ್ತು ತನುಷ್ ಕೋಟ್ಯಾನ್ ಇನ್ನಿಬ್ಬರ ವಿಕೆಟ್ ಪಡೆದು ಕರ್ನಾಟಕ ತಂಡವನ್ನು ಆರು ವಿಕೆಟ್ ನಷ್ಟಕ್ಕೆ 285 ರನ್‌ಗಳಿಗೆ ಕಟ್ಟಿಹಾಕಿದರು. ಆದಾಗ್ಯೂ, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಈಗಾಗಲೇ 69.94ರ ಅದ್ಭುತ ಸರಾಸರಿಯಲ್ಲಿ 1000ಕ್ಕೂ ಹೆಚ್ಚು ರನ್ ಗಳಿಸಿರುವ 22 ವರ್ಷದ ಸ್ಮರಣ್, ಒತ್ತಡದ ಸಂದರ್ಭದಲ್ಲೂ ಉತ್ತಮ ಪ್ರದರ್ಶನ ನೀಡಿದರು. ಮುಂಬೈ ನಂತರ ಟೂರ್ನಮೆಂಟ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವಾದ ಕರ್ನಾಟಕ ಪರ ವಿದ್ಯಾಧರ್ ಪಾಟೀಲ್ 30 ಎಸೆತಗಳಲ್ಲಿ 31 ರನ್ ಗಳಿಸಿ ನೆರವಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಮೊದಲ ಇನಿಂಗ್ಸ್‌ನಲ್ಲಿ 120 ರನ್‌ಗಳಿಗೆ ಆಲೌಟ್ ಆಯಿತು. ನಂತರ ಬ್ಯಾಟಿಂಗ್ ಮಾಡಿದ ಕರ್ನಾಟಕ 173 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 53 ರನ್‌ಗಳ ಪ್ರಮುಖ ಮುನ್ನಡೆ ಸಾಧಿಸಿತು. ಎರಡನೇ ಇನಿಂಗ್ಸ್‌ನಲ್ಲಿ ಮುಂಬೈ 10 ವಿಕೆಟ್ ನಷ್ಟಕ್ಕೆ 377 ರನ್ ಗಳಿಸಿತು. 325 ರನ್ ಗುರಿಯನ್ನು ಬೆನ್ನತ್ತಿದ ಕರ್ನಾಟಕ ಎರಡನೇ ಇನಿಂಗ್ಸ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿತು.

IPL 2026: ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಪರ ಕೆ.ಎಲ್ ರಾಹುಲ್ ಶತಕ; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಳ್ಳೆಯ ಸುದ್ದಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


