T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್; ನಮೀಬಿಯಾ ವಿರುದ್ಧ 93 ರನ್ ಜಯ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 210 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನಮೀಬಿಯಾ 18.2 ಓವರ್ ನಲ್ಲಿ 116 ರನ್ ಗಳಿಗೆ ಆಲೌಟ್ ಆಗುವ ಮೂಲಕ 93 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಯ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 70 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 210 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನಮೀಬಿಯಾ 18.2 ಓವರ್ ನಲ್ಲಿ 116 ರನ್ ಗಳಿಗೆ ಆಲೌಟ್ ಆಗುವ ಮೂಲಕ 93 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.
ಭಾರತದ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಪಡೆದರು. ಉಳಿದಂತೆ ಅರ್ಶ್ ದೀಪ್ ಸಿಂಗ್, ಶಿವಂ ದುಬೆ ಮತ್ತು ಜಸ್ ಪ್ರೀತ್ ಬುಮ್ರಾ ತಲಾ 1 ವಿಕೆಟ್ ಪಡೆದರು.
ಭರ್ಜರಿ ಆರಂಭ ಪಡೆದ ನಮೀಬಿಯಾ
ಇನ್ನು ಭಾರತ ನೀಡಿದ್ದ 210 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನಮೀಬಿಯಾ ಭರ್ಜರಿ ಆರಂಭ ಪಡೆದಿತ್ತು. ನಮೀಬಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಫ್ರೈಲಿಂಕ್ (22) ಮತ್ತು ಸ್ಟೀನ್ ಕಾಂಪ್ (29) ಜೋಡಿ 33 ರನ್ ಗಳ ಜೊತೆಯಾಟ ನೀಡಿತು.
ಈ ಜೋಡಿ ಔಟಾಗುತ್ತಿದ್ದಂತೆಯೇ ಜಾನ್ ನಿಕೋಲ್ ಲಾಫ್ಟಿ-ಈಟನ್ (13) ಮತ್ತು ನಾಯಕ ಎರಾಸ್ಮಸ್ (18) ಭಾರತಕ್ಕೆ ಕೊಂಚ ಪ್ರತಿರೋಧ ತೋರಿದರು. ಆದರೆ ಭಾರತೀಯ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಪತರುಗುಟ್ಟಿದ ನಮೀಬಿಯಾ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಅಂತಿಮವಾಗಿ 18.2 ಓವರ್ ನಲ್ಲಿ 116 ರನ್ ಗಳಿಗೇ ಆಲೌಟ್ ಆಗಿ 93 ರನ್ ಗಳ ಹೀನಾಯ ಸೋಲು ಕಂಡಿತು.
ಭಾರತ ಭರ್ಜರಿ ಬ್ಯಾಟಿಂಗ್
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಇಶಾನ್ ಕಿಶನ್ (61) ಮತ್ತು ಹಾರ್ದಿಕ್ ಪಾಂಡ್ಯಾ (52) ಸ್ಫೋಟಕ ಅರ್ಧಶತಕಗಳ ನೆರವಿನಿಂದ ಭಾರತ ನಿಗದಿತ 20 ಓವರ್ ನಲ್ಲಿ 209 ರನ್ ಪೇರಿಸಿತ್ತು.
ಪಾಂಡ್ಯಾ ಪಂದ್ಯ ಶ್ರೇಷ್ಠ
ಇನ್ನು ಬ್ಯಾಟಿಂಗ್ ವೇಳೆ ಅರ್ದಶತಕ ಸಿಡಿಸಿ ಬೌಲಿಂಗ್ ನಲ್ಲೂ 2 ವಿಕೆಟ್ ಕಬಳಿಸಿ ಆಲ್ರೌಂಡ್ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



