ಕ್ರಿಕೆಟ್

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

ಪಾಕಿಸ್ತಾನದ ಕ್ಯಾಪ್ಟನ್ ಸಲ್ಮಾನ್ ಅಲಿ ಅಘಾ ಅವರಿಗೆ ಕೈಕುಲುಕುವ ಸಾಧ್ಯತೆ ಕಡಿಮೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!
ಸೂರ್ಯ ಕುಮಾರ್ ಯಾದವ್ ಹಾಗೂ ಸಲ್ಮಾನ್ ಅಲಿ ಆಘಾ
Published On :

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನದ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ಮಾಡದಿರಲು ಟೀಂ ಇಂಡಿಯಾ ನಿರ್ಧರಿಸಿದೆ.

ಪಾಕಿಸ್ತಾನದ ಬಗೆಗಿನ ಭಾರತದ 'ನೋ-ಹ್ಯಾಂಡ್‌ಶೇಕ್ ನೀತಿ'ಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಮತ್ತು ಟಾಸ್ ವೇಳೆ ಹಾಗೂ ಪಂದ್ಯದ ನಂತರ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನದ ಕ್ಯಾಪ್ಟನ್ ಸಲ್ಮಾನ್ ಅಲಿ ಅಘಾ ಅವರಿಗೆ ಕೈಕುಲುಕುವ ಸಾಧ್ಯತೆ ಕಡಿಮೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ 2025 ರ ಏಷ್ಯಾ ಕಪ್‌ನಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಹ್ಯಾಂಡ್ ಶೇಕ್ ಮಾಡಿರಲಿಲ್ಲ. ಅಂದಿನಿಂದ, ಭಾರತೀಯ ಕ್ರಿಕೆಟಿಗರು (ಪುರುಷರು ಮತ್ತು ಮಹಿಳೆಯರು ಇಬ್ಬರೂ) ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಕಿಸ್ತಾನದ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ಮಾಡುತ್ತಿಲ್ಲ.

ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸೂರ್ಯ ಕುಮಾರ್ ಯಾದವ್, ಇನ್ನೂ 24 ಗಂಟೆಗಳ ಟೈಮ್ ಇದೆ. ಕಾಯಿರಿ. ಅದರ ಕಡೆಗೆ ಯಾಕೆ ಹೆಚ್ಚಾಗಿ ಗಮನ ನೀಡ್ತಿರಾ. ನಾವು ಕ್ರಿಕೆಟ್ ಆಡಲು ಬಂದಿದ್ದೇವೆ. ಉತ್ತಮ ರೀತಿಯಲ್ಲಿ ಕ್ರಿಕೆಟ್ ಆಡ್ತೀವಿ. ಹ್ಯಾಂಡ್ ಶೇಕ್ ಕುರಿತು ಇಂದು ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಮತ್ತೊಂದೆಡೆ ಇದರ ಬಗ್ಗೆ ನಾಳೆ ನೋಡೋಣಾ ಅಂತಾ ಸಲ್ಮಾನ್ ಅಲಿ ಆಘಾ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.