T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!
ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.

ಕೊಲಂಬೊ: ಭಾರತ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತಕ್ಕೆ ಪ್ರವೇಶಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 61 ರನ್ ಗಳ ಅಂತರದಿಂದ ಸೋಲಿಸಿದ ಭಾರತ ನಿರಾಯಾಸವಾಗಿ ಸೂಪರ್ ಎಂಟರ ಸುತ್ತಿಗೆ ಪ್ರವೇಶ ಗಿಟ್ಟಿಸಿಕೊಂಡಿತು.
ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಾಚರಣೆಗೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.
ಪಂದ್ಯ ನಡೆದ ಶ್ರೀಲಂಕಾದ ಕೊಲಂಬೊ, ನವದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಜನರು , ಅದರಲ್ಲೂ ಯುವ ಜನತೆ ದೇಶದ ಪರ ಘೋಷಣೆ, ಜೈಕಾರ ಹಾಕುವ ಮೂಲಕ ಸಂಭ್ರಮಪಟ್ಟಿದ್ದಾರೆ.
ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಡಾ. ಹೆಚ್. ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮೂಲಕ ಭಾರತ ತಂಡಕ್ಕೆ ಶುಭಾಶಯ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



