T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್‌ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಆದಾಗ್ಯೂ ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



