T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!
ಟಿ20 ವಿಶ್ವಕಪ್ 2026ರ ಪಾಕಿಸ್ತಾನ ಮತ್ತು ಭಾರತ ನಡುವಿನ ಗ್ರೂಪ್ ಹಂತದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲಂಬೋದ ಪ್ರೇಮದಾಸ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.

ಟಿ20 ವಿಶ್ವಕಪ್ 2026ರ ಪಾಕಿಸ್ತಾನ ಮತ್ತು ಭಾರತ ನಡುವಿನ ಗ್ರೂಪ್ ಹಂತದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲಂಬೋದ ಪ್ರೇಮದಾಸ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್ ಸಮಯದಲ್ಲಿ ಎರಡೂ ತಂಡಗಳ ನಾಯಕರು ಕೈಕುಲುಕಲಿಲ್ಲ. ಕಳೆದ ವರ್ಷದ ಏಷ್ಯಾಕಪ್ನಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕುತ್ತಿಲ್ಲ. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಾಕಿಸ್ತಾನ ತಂಡವು ಹಿಂದಿನ ಪಂದ್ಯದಿಂದ ಆಡುವ XI ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಆದರೆ ಭಾರತ ತಂಡವು ಎರಡು ಬದಲಾವಣೆಗಳನ್ನು ಮಾಡಿದೆ. ಫಾರ್ಮ್ನಲ್ಲಿಲ್ಲದ ಸಂಜು ಸ್ಯಾಮ್ಸನ್ ಬದಲಿಗೆ ಓಪನರ್ ಅಭಿಷೇಕ್ ಶರ್ಮಾ ಮರಳಿದ್ದು ಕುಲದೀಪ್ ಯಾದವ್ಗೆ ಸಹ ಅವಕಾಶ ನೀಡಲಾಗಿದೆ.
ಎರಡೂ ತಂಡಗಳ ಆಟಗಾರರು
ಭಾರತ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಅಲಿ ಅಘಾ (ನಾಯಕ), ಬಾಬರ್ ಅಜಮ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಉಸ್ಮಾನ್ ತಾರಿಕ್, ಅಬ್ರಾರ್ ಅಹ್ಮದ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



