T20 World Cup, IND vs Pak: ಇಶಾನ್ ಕಿಶನ್ ವೇಗದ ಅರ್ಧ ಶತಕ; ಪಾಕ್‌ಗೆ 176 ರನ್ ಟಾರ್ಗೆಟ್!
ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಮೊದಲ ಓವರ್ ನಲ್ಲೇ ಡಕೌಟ್ ಆಗಿ ಪೆವಿಲಿಯನ್ ಸೇರಿದರು.

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಎ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದ್ದು 175 ರನ್ ಕಲೆ ಹಾಕಿದೆ. ಕೊಲಂಬೋದ ಪ್ರೇಮದಾಸ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಾಕಿಸ್ತಾನ ನಾಯಕ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡತ್ತು. ಹೀಗಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಮೊದಲ ಓವರ್ ನಲ್ಲೇ ಡಕೌಟ್ ಆಗಿ ಪೆವಿಲಿಯನ್ ಸೇರಿದರು. ಆದರೆ ಇಶಾನ್ ಕಿಶನ್ 27 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ ಅರ್ಧಶತಕ ಸಿಡಿಸಿದ್ದು ಟೀಮ್ ಇಂಡಿಯಾವನ್ನು ಆರಂಭಿಕ ಹಿನ್ನಡೆಯಿಂದ ಪಾರು ಮಾಡಿದ್ದಾರೆ.
ತಿಲಕ್ ವರ್ಮಾ 25 ರನ್‌ಗಳಿಗೆ ಸ್ಯಾಮ್ ಅಯೂಬ್‌ಗೆ ಎಲ್‌ಬಿಡಬ್ಲ್ಯೂ ಆದರು. ನಂತರ ಬಂದ ಹಾರ್ದಿಕ್ ಪಾಂಡ್ಯ ಮುಂದಿನ ಎಸೆತದಲ್ಲಿ ರನ್ ಗಳಿಸದೆ ಔಟಾದರು. 77 ರನ್ ಗಳಿಸಿ ಇಶಾನ್ ಕಿಶನ್ ಔಟಾದ ನಂತರ, ಸೂರ್ಯ ಕುಮಾರ್ ಮತ್ತು ತಿಲಕ್ ರನ್ ವೇಗವನ್ನು ನಿಧಾನವಾಯಿತು. 13 ಓವರ್‌ಗಳಲ್ಲಿ ಭಾರತ 2 ವಿಕೆಟ್‌ಗಳ ನಷ್ಟಕ್ಕೆ 118 ರನ್ ಗಳಿಸಿತ್ತು. ನಿಗದಿತ ಓವರ್ ನಲ್ಲಿ ಭಾರತ 7 ನಷ್ಟಕ್ಕೆ 175 ರನ್ ಗಳಿಸಿದೆ. ಪಾಕ್ ಪರ ಸೈಮ್ ಆಯೂಬ್ 3 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



