T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಭರ್ಜರಿ ಜಯ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ಗಳಿಸಿತು.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನೇಪಾಳ ಭರ್ಜರಿ 7 ವಿಕೆಟ್ ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ಗಳಿಸಿತು.
ಆರಂಭಿಕ ಆಟಗಾರರಾದ ಜಾರ್ಜ್ ಮುನ್ಸಿ 27, ಮೈಕೆಲ್ ಜಾನ್ಸ್ 71, ಬ್ರಾಡನ್ ಮ್ಯಾಕ್ ಮುಲನ್ 25, ಬೆರಿಂಗ್ ಟನ್, ಮಾರ್ಕ್ ವ್ಯಾಟ್ 10 ರನ್ ಗಳಿಸಿದರು. ಉಳಿದಂತೆ ಯಾವುದೇ ಆಟಗಾರರು ಎರಡಂಕಿ ದಾಟಲಿಲ್ಲ. ಹೀಗಾಗಿ ಸ್ಕಾಟ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.
ಸ್ಕಾಟ್ಲೆಂಡ್ ನೀಡಿದ 170 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ನೇಪಾಳ 19.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 171 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು. ನೇಪಾಳ ಪರ ದೀಪೇಂದರ್ ಸಿಂಗ್ ಐರಿ ಅಜೇಯ ಅರ್ಧಶತಕ ಗಳಿಸಿ, ಗೆಲುವಿನ ರೂವಾರಿ ಎನಿಸಿಕೊಂಡರು.
ಉಳಿದಂತೆ ಕುಶಾಲ್ ಬುರ್ಟೆಲ್ 43, ಆಶಿಫ್ ಶೇಕ್ 33, ರೋಹಿತ್ ಪೌಡೆಲ್ 16,ಗುಲ್ಸಾನ್ ಜಾ 24 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



