T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ಗೆ 61 ರನ್ ಭರ್ಜರಿ ಗೆಲುವು
ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.

ಕೊಲಂಬೋ: 2026ರ T20 ವಿಶ್ವಕಪ್‌ನ ಆರನೇ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಬುಧವಾರ ಶ್ರೀಲಂಕಾ ವಿರುದ್ಧ 61 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸ ಹೆಚ್ಚಿಸಿಕೊಂಡಿದೆ.
ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.
ನ್ಯೂಜಿಲ್ಯಾಂಡ್ ನಾಯಕ ಮುಚೆಲ್ ಸ್ಯಾಂಟ್ನರ್(47) ಹಾಗೂ ಆಲ್ರೌಂಡರ್ ಕೋಲ್ ಮೆಕೆಂಜಿ(32) ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು.
ಗೆಲುವಿಗೆ 169 ರನ್ ಗಳ ಸವಾಲಿನ ಮೊತ್ತ ಬೆನ್ನತ್ತಿದ ಶ್ರೀಲಂಕಾ, 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 107 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 61 ರನ್ ಗಳಿಂದ ಸೋಲು ಒಪ್ಪಿಕೊಂಡ ಶ್ರೀಲಂಕಾ, T20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



