T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು
ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಇದು ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ.

ಚೆನ್ನೈ: 2026ರ T20 ವಿಶ್ವಕಪ್‌ನ 8ನೇ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುರುವಾರ ಜಿಂಬಾಬ್ವೆ ವಿರುದ್ಧ 72 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸ ಹೆಚ್ಚಿಸಿಕೊಂಡಿದೆ.
ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಇದು ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ.
ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಭಾರತಕ್ಕೆ ಬಲವಾದ ಆರಂಭ ನೀಡಿದರು. ಈ ಇಬ್ಬರು ಆಟಗಾರರು 3.4 ಓವರ್‌ಗಳಲ್ಲಿ 48 ರನ್ ಪೇರಿಸಿದರು. ಸಂಜು 15 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿ ಸೇರಿದಂತೆ 24 ರನ್ ಗಳಿಸಿ ಔಟಾದರು. ನಂತರ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಜೊತೆ 42 ಎಸೆತಗಳಲ್ಲಿ ಎರಡನೇ ವಿಕೆಟ್‌ಗೆ 72 ರನ್ ಸೇರಿಸಿದರು. ಇಶಾನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 24 ಎಸೆತಗಳಲ್ಲಿ ಐದು ಬೌಂಡರಿಗಳೊಂದಿಗೆ 38 ರನ್ ಗಳಿಸಿದರು. ನಂತರ ಅಭಿಷೇಕ್ ಶರ್ಮಾ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಜೊತೆ ಮೂರನೇ ವಿಕೆಟ್‌ಗೆ 30 ರನ್ ಸೇರಿಸಿದರು.
ನಂತರ ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಜೊತೆ ಐದನೇ ವಿಕೆಟ್‌ಗೆ 31 ಎಸೆತಗಳಲ್ಲಿ ದಾಖಲೆಯ 84 ರನ್‌ಗಳ ಜೊತೆಯಾಟ ಹಂಚಿಕೊಂಡರು.
ಗೆಲುವಿಗೆ 257 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡ, 20 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಕೇವಲ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಭಾರತ 72 ರನ್ ಗಳ ದೊಡ್ಡ ಗೆಲುವು ಸಾಧಿಸಿತು.
ಭಾರತದ ಪರ ಅರ್ಷದೀಪ್ ಸಿಂಗ್ ಮೂರು ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಅವರು ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


