ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ; ಜಮ್ಮು-ಕಾಶ್ಮೀರ ಸಿಎಂ; Video
ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಐತಿಹಾಸಿಕ ಚೊಚ್ಚಲ ಪ್ರಶಸ್ತಿ ಗೆಲುವಿಗೆ ಬಹಳ ಹತ್ತಿರದಲ್ಲಿದೆ.
ಈ ಮಧ್ಯೆ ಪಂದ್ಯ ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ. ನಾಳೆ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಲಿದ್ದಾರೆ.
ಇನ್ನು ಮಾಧ್ಯಮಗಳ ಜೊತೆ ಮಾತನಾಡಿದ ಒಮರ್ ಅಬ್ದುಲ್ಲಾ, ನಮ್ಮ ತಂಡ ಮೊದಲ ಬಾರಿಗೆ ರಣಜಿ ಗೆಲ್ಲುವ ಹೊಸ್ತಿಲಲ್ಲಿದೆ. ನಮ್ಮ ತಂಡವನ್ನು ಪ್ರೋತ್ಸಾಹಿಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಕರ್ನಾಟಕವನ್ನು ಸೋಲಿಸಿ ನಾವು ಖಂಡಿತವಾಗಿ ಟ್ರೋಫಿ ತೆಗೆದುಕೊಂಡು ಹೋಗುತ್ತೇವೆ ಎಂದು ಒಮರ್ ವಿಶ್ವಾಸ ವ್ಯಕ್ತಪಡಿಸಿದರು.

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


