T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!
ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ಟೀಮ್ ಇಂಡಿಯಾದ ಸ್ಟಾರ್ ಫಿನಿಷರ್ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ರ ಸಿಂಗ್ ನಿಧನರಾಗಿದ್ದಾರೆ. ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದ್ದರಿಂದ ರಿಂಕು ಸಿಂಗ್ ಅವರು ಟಿ20 ವಿಶ್ವಕಪ್ ಪಂದ್ಯಾವಳಿಯ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯಕ್ಕೂ ಮುನ್ನ ಮನೆಗೆ ತೆರಳಿದ್ದರು.
ಅಪ್ಪನ ಸ್ಥಿತಿ ಗಂಭೀರಗೊಂಡಿದ್ದರೂ ಟಿ20 ವಿಶ್ವಕಪ್‌ನ ಕೆಲ ಪಂದ್ಯಗಳನ್ನು ಆಡುವ ಮೂಲಕ ರಿಂಕು ಸಿಂಗ್ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಹರ್ಭಜನ್ ತಿಳಿಸಿದ್ದಾರೆ.
ರಿಂಕು ಸಿಂಗ್ ಅವರ ತಂದೆ ಶ್ರೀ ಖಾನ್‌ಚಂದ್ ಸಿಂಗ್ ಜಿ ಅವರ ನಿಧನದ ಬಗ್ಗೆ ತಿಳಿದು ನೋವಾಯಿತು. ಟಿ20 ವಿಶ್ವಕಪ್ ಸಮಯದಲ್ಲಿ ತಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿದ್ದ ರಿಂಕು ಮತ್ತು ಅವರ ಕುಟುಂಬಕ್ಕೆ ಇದು ಕಷ್ಟಕರ ಸಮಯವಾಗಿದೆ ಎಂದು ಹರ್ಭಜನ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ರಿಂಕು ಸಿಂಗ್ ಉತ್ತರ ಪ್ರದೇಶದ ಅಲಿಗಢ ನಗರದವರು. ಅವರು ಸಾಮಾನ್ಯ ಕುಟುಂಬದಿಂದ ಬಂದವರು. ತಮ್ಮ ಕಠಿಣ ಪರಿಶ್ರಮದಿಂದ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಹೆಸರು ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಕೊಲ್ಕತಾ ಪರ ಆಡುತ್ತಾ ಅವರು ಗಮನ ಸೆಳೆದರು.
ವಿಶೇಷವಾಗಿ ಯಶ್ ದಯಾಳ್ ಅವರ ಒಂದೇ ಓವರ್‌ನಲ್ಲಿ ಐದು ಸಿಕ್ಸರ್ ಬಾರಿಸಿದ ಕ್ಷಣವು ಅವರನ್ನು ದೇಶಾದ್ಯಂತ ಪ್ರಸಿದ್ಧರನ್ನಾಗಿಸಿತು. ಅದರ ಬಳಿಕ ರಿಂಕು ಹಿಂದಿರುಗಿ ನೋಡಲೇ ಇಲ್ಲ. ಅವರು ಭಾರತ ತಂಡದಲ್ಲಿ ಸ್ಥಾನ ಪಡೆದು ಹಲವು ಪ್ರಮುಖ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


