RCB ಅಭಿಮಾನಿಗಳಿಗೆ ಸಿಹಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ಅನುಮತಿ
ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು KSCAಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್ಸಿಎ ಸಿದ್ಧವಾಗಿದೆ ಎಂದು ಕೆಎಸ್ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದರು. ಕೆಎಸ್ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಂದಣಿ ನಿಯಂತ್ರಣ ಸಮಸ್ಯೆಗೆ ಪರಿಹಾರ; KSCA ಮುಂದೆ RCB ಪ್ರಸ್ತಾಪ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


