60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 154 ರನ್‌ಗಳ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ ಬಾರಿಸಿದೆ. ಭಾರತ 2 ವಿಕೆಟ್‌ಗಳ ನಷ್ಟಕ್ಕೆ 155 ರನ್ ಬಾರಿಸುವ ಮೂಲಕ ಗುರಿ ತಲುಪಿದೆ.

ಗುವಾಹಟಿ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 154 ರನ್‌ಗಳ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ ಬಾರಿಸಿದೆ. ಭಾರತ 2 ವಿಕೆಟ್‌ಗಳ ನಷ್ಟಕ್ಕೆ 155 ರನ್ ಬಾರಿಸುವ ಮೂಲಕ ಗುರಿ ತಲುಪಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಸರಣಿ ಕೈವಶ ಮಾಡಿಕೊಂಡಿದೆ.
ಬರ್ಸಪಾರ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 153 ರನ್ ಗಳಿಸಿತ್ತು. ಕಿವೀಸ್ ಪರ ಗ್ಲೇನ್ ಪಿಲಿಪ್ಸ್ 48, ಮಾರ್ಕ್ ಚಪ್ಮನ್ 32, ಮಿಚೆಲ್ ಸ್ಯಾಂಟ್ನರ್ 27 ರನ್ ಗಳಿಸಿದ್ದಾರೆ. ಭಾರತದ ಪರ ಜಸ್ ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ರವಿ ಬಿಷ್ಣೋಯ್ ತಲಾ 2 ವಿಕೆಟ್ ಪಡೆದರೇ ಹರ್ಷಿತ್ ರಾಣಾ 1 ವಿಕೆಟ್ ಪಡೆದರು.
ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅಜೇಯ ಆಟ ಮುಂದುವರೆಸಿದ ಅಭಿಷೇಕ್ 68 ರನ್ ಗಳಿಸಿದರೆ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 57 ರನ್ ಬಾರಿಸಿದರು. ಇಶಾನ್ ಕಿಶನ್ 28 ರನ್ ಗಳಿಸಿದರು. ಮೂರನೇ ಟಿ20ಐ ಗೆಲ್ಲುವ ಮೂಲಕ, ಭಾರತ 5 ಪಂದ್ಯಗಳ ಸರಣಿಯಲ್ಲಿ ಅಜೇಯ 3-0 ಮುನ್ನಡೆ ಸಾಧಿಸಿತು. ಇದರೊಂದಿಗೆ, ಟೀಮ್ ಇಂಡಿಯಾ ಸತತ 12ನೇ ಟಿ20ಐ ಸರಣಿಯನ್ನು ಗೆದ್ದುಕೊಂಡಿತು. ಭಾರತ ಮೊದಲ ಪಂದ್ಯವನ್ನು 48 ರನ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ನಾಲ್ಕನೇ ಪಂದ್ಯ ಜನವರಿ 28ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

CCL 2026: ಭೋಜ್ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಗೆ 18 ರನ್ ರೋಚಕ ಜಯ; ಸೆಮಿಫೈನಲ್ಗೆ ಎಂಟ್ರಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


