ನ್ಯೂಜಿಲೆಂಡ್ ವಿರುದ್ಧದ 5ನೇ T20: ಒಂದೇ ಓವರ್ ನಲ್ಲಿ 4, 4, 4, 6, 4, 6 ಚಚ್ಚಿದ ಇಶಾನ್ ಕಿಶಾನ್!
ಒಂದೇ ಓವರ್ ನಲ್ಲಿ ಭರ್ಜರಿ ನಾಲ್ಕು ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸುವ ಮೂಲಕ 28 ರನ್ ಚಚ್ಚಿದ್ದಾರೆ. Murderous Form ಎಂದು ಲೆಜೆಂಡರಿ ಸುನೀಲ್ ಗವಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಇಶಾನ್ ಕಿಶಾನ್ ಉಗ್ರಾವತಾರಕ್ಕೆ ಕಿವೀಸ್ ಬೌಲರ್ ಗಳು ದಂಗಾಗಿದ್ದಾರೆ.
ಒಂದೇ ಓವರ್ ನಲ್ಲಿ ಭರ್ಜರಿ ನಾಲ್ಕು ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸುವ ಮೂಲಕ 28 ರನ್ ಚಚ್ಚಿದ್ದಾರೆ. ಇಶ್ ಸೋಧಿ ಬೌಲಿಂಗ್ ನಲ್ಲಿ 4, 4, 4, 6, 4, 6 ಚಚ್ಚಿದ ಇಶಾನ್ ಕಿಶಾನ್, 28 ಎಸೆತಗಳಲ್ಲಿ ಅರ್ಧಶತಕವನ್ನು ಗಳಿಸಿದರು.
ಅಲ್ಲದೇ ಸ್ವಲ್ಪ ಸಮಯದಲ್ಲೇ, 33 ಎಸೆತಗಳಲ್ಲಿ 75 ರನ್ ಗಳಿಸಿದರು. Murderous Form ಎಂದು ಲೆಜೆಂಡರಿ ಸುನೀಲ್ ಗವಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮತ್ತೊಂದೆಡೆ ಇವರಿಗೆ ಉತ್ತಮ ಸಾಥ್ ನೀಡಿದ ಸೂರ್ಯ ಕುಮಾರ್ ಯಾದವ್ ಕೂಡಾ ನ್ಯೂಜಿಲೆಂಡ್ ಬೌಲರ್ ಗಳನ್ನು ಬೆಂಡತ್ತಿದ್ದು, 30 ಎಸೆತಗಳಲ್ಲಿ 6 ಸಿಕ್ಸರ್, 4 ಬೌಂಡರಿಗಳೊಂದಿಗೆ 63 ರನ್ ಗಳಿಸಿ ಔಟಾಗಿದ್ದಾರೆ.
ಉಳಿದಂತೆ ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 30 ರನ್ ಗಳಿಸಿ ಔಟಾದರೆ, ಸಂಜು ಸ್ಯಾಮ್ಸನ್ ಕೇವಲ 6 ರನ್ ಗಳಿಗೆ ಬೆವನ್ ಜಾಕೊಬ್ಸ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಇದಕ್ಕೂ ಮುನ್ನಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸೂರ್ಯ ಕುಮಾರ್ ಯಾದವ್ ಅವರ ನಿರ್ಧಾರ 'ಇಷ್ಟವಾಯಿತು' ಎಂದು ಲೆಜೆಂಡರಿ ಸುನೀಲ್ ಗವಾಸ್ಕರ್ ವೀಕ್ಷಕ ವಿವರಣೆಯಲ್ಲಿಯೇ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



