ಅನಿರುದ್ಧ್ ರವಿಚಂದರ್ ಜೊತೆ ಮದುವೆ ವದಂತಿ; ಕೊನೆಗೂ ಮೌನ ಮುರಿದ ಸನ್‌ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್!
ಕಾವ್ಯಾ ಮಾರನ್ ಸನ್‌ರೈಸರ್ಸ್ ಹೈದರಾಬಾದ್‌ನ (SRH) ನಿರ್ವಹಣೆಯಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಇತ್ತ ಅನಿರುದ್ಧ್ ಭಾರತದ ಅತ್ಯಂತ ಬ್ಯುಸಿಯಾಗಿರುವ ಸಂಗೀತ ಸಂಯೋಜಕರಲ್ಲಿ ಒಬ್ಬರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ, ಜನಪ್ರಿಯ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್ ಅವರು ವಿವಾಹವಾಗಲಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ನೀಡಿವೆ ಮತ್ತು ಮದುವೆಯ ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ ಎಂದು ಹಲವಾರು ವೈರಲ್ ಪೋಸ್ಟ್‌ಗಳು ಹೇಳಿಕೊಂಡಿವೆ.
ಅನಿರುದ್ಧ್ ಅವರ ಆಪ್ತ ಸಂಬಂಧಿ, ನಟ ವೈಜಿ ಮಹೇಂದ್ರನ್ ಅವರ ಹೇಳಿಕೆಗಳು ಅಭಿಮಾನಿಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ ನಂತರ ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಯಿತು.
ಆದರೆ, ಕಾವ್ಯಾ ಮಾರನ್ ಅವರ ತಂಡ ಇದೀಗ ಈ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಕಾವ್ಯಾ ಮತ್ತು ಅನಿರುದ್ಧ್ ಅವರ ವಿವಾಹದ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ಯಾವುದೇ ವಾಸ್ತವಿಕ ಆಧಾರವಿಲ್ಲ ಎಂದು ಪ್ರತಿನಿಧಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ವೈರಲ್ ಆಗಿರುವ ಈ ಹೇಳಿಕೆಗಳನ್ನು ಆಧಾರರಹಿತ ವದಂತಿಗಳೆಂದು ತಂಡ ತಳ್ಳಿಹಾಕಿದೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪರಿಶೀಲಿಸದ ಮಾಹಿತಿಯನ್ನು ಜನರು ನಂಬಬಾರದು ಅಥವಾ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದೆ.
ಅನಿರುದ್ಧ್ ರವಿಚಂದರ್ ಅವರು ಈ ರೀತಿಯ ವದಂತಿಗಳಿಗೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರ ಹೆಸರು ಹಲವಾರು ಸೆಲೆಬ್ರಿಟಿಗಳೊಂದಿಗೆ ತಳುಕು ಹಾಕಿಕೊಂಡಿತ್ತು.
ಈಮಧ್ಯೆ, ಕಾವ್ಯಾ ಮಾರನ್ ಸನ್‌ರೈಸರ್ಸ್ ಹೈದರಾಬಾದ್‌ನ (SRH) ನಿರ್ವಹಣೆಯಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಇತ್ತ ಅನಿರುದ್ಧ್ ಭಾರತದ ಅತ್ಯಂತ ಬ್ಯುಸಿಯಾಗಿರುವ ಸಂಗೀತ ಸಂಯೋಜಕರಲ್ಲಿ ಒಬ್ಬರಾಗಿದ್ದಾರೆ. ಅವರು ಇದೀಗ ಹಲವಾರು ಹೈ-ಪ್ರೊಫೈಲ್ ಯೋಜನೆಗಳನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



