ಕ್ರಿಕೆಟ್

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿ ಇಂಗ್ಲೆಂಡ್ 19 ಓವರ್ ಮುಕ್ತಾಯಕ್ಕೆ 191 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ
ಟೀಂ ಇಂಡಿಯಾ ತಂಡ
Published On :

ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿ ಇಂಗ್ಲೆಂಡ್ 19 ಓವರ್ ಮುಕ್ತಾಯಕ್ಕೆ 191 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಇಂಗ್ಲೆಂಡ್ ಪರ ಆರಂಭಿಕರಾದ ಫಿಲ್ ಸಾಲ್ಟ್ (0) ಹಾಗೂ ಜೋಸ್ ಬಟ್ಲರ್ (0) ಅರ್ಷದೀಪ್ ಸಿಂಗ್ ಎಸೆದ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ ಕೇವಲ 15 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 39 ರನ್ ಬಾರಿಸಿ ಔಟಾದರು. ಟಾಮ್ ಬ್ಯಾಂಟನ್ (39) ಕ್ಯಾಚ್ ನೀಡಿ ನಿರ್ಗಮಿಸಿದರೆ, ಇದರ ಬೆನ್ನಲ್ಲೇ ವಿಲ್ ಜ್ಯಾಕ್ಸ್ (9) ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು.

ಅಂತಿಮವಾಗಿ ಜೇಕಬ್ ಬೆಥಲ್ ಅಜೇಯ 76 ಬಾರಿಸಿ ಇನ್ನು 1 ಓವರ್ ಬಾಕಿ ಇರುವಂತೆ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತದ ಪರ ಅರ್ಶ್ದೀಪ್ ಸಿಂಗ್ 3, ಹರ್ಷಿತ್ ರಾಣಾ, ಅಕ್ಸರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆದರು.

ಭಾರತದ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರೆ, 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಇಶಾನ್ ಕಿಶನ್ 40 ಎಸೆತಗಳಲ್ಲಿ 6 ಬೌಂಡರಿ ಸಹಿತ 49 ರನ್ ಗಳಿಸಿ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು. ಬಳಿಕ ನಾಯಕ ಶ್ರೇಯಸ್ ಅಯ್ಯರ್ 22 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ 37 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 11 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ ಅಜೇಯ 24 ರನ್ ಗಳಿಸಿ ಭಾರತದ ಬೃಹತ್ ಮೊತ್ತದಲ್ಲಿ ಪ್ರಮುಖ ಪಾತ್ರ ವಹಿಸಿದರು.

ಉಳಿದಂತೆ ಶಿವಂ ದುಬೆ 5, ಅಕ್ಸರ್ ಪಟೇಲ್ 2 ಮತ್ತು ಹರ್ಷಿತ್ ರಾಣಾ 6 ರನ್ ಗಳಿಸಿದರು. ಇತ್ತ ಇಂಗ್ಲೆಂಡ್ ಪರವಾಗಿ ಸ್ಯಾಮ್ ಕರನ್ 3 ವಿಕೆಟ್ ಕಬಳಿಸಿದರೆ, ಜೋಫ್ರಾ ಆರ್ಚರ್, ವಿಲ್ ಜ್ಯಾಕ್ಸ್ ಮತ್ತು ಲಿಯಾಮ್ ಡಾಸನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.