ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ನಿತೀಶ್ ಕುಮಾರ್ ರೆಡ್ಡಿ ಔಟ್; ತಂಡಕ್ಕೆ ಸ್ಟಾರ್ ಆಲ್ರೌಂಡರ್ ಸೇರ್ಪಡೆ!
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಸರಣಿಯ ಉದ್ಘಾಟನಾ ಪಂದ್ಯದ ನಂತರ, ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾರ್ಡಿಫ್ (ಜುಲೈ 16) ಮತ್ತು ಲಾರ್ಡ್ಸ್ (ಜುಲೈ 19) ನಲ್ಲಿ ಮುಂದಿನ ಪಂದ್ಯಗಳನ್ನು ಆಡಲಿವೆ.
ಜುಲೈ 14 ರಂದು ಬರ್ಮಿಂಗ್ಹ್ಯಾಮ್ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಗಾಯಗೊಂಡಿರುವ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಸೀಮ್ ಬೌಲಿಂಗ್ ಆಲ್ರೌಂಡರ್ ಶಿವಂ ದುಬೆ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಐದು ಪಂದ್ಯಗಳ ಟಿ20ಐ ಸರಣಿಗಾಗಿ ಸದ್ಯ ಇಂಗ್ಲೆಂಡ್ನಲ್ಲಿರುವ ದುಬೆ, ಏಕದಿನ ಪಂದ್ಯಗಳಿಗೆ ಹಿಂತಿರುಗಲಿದ್ದಾರೆ. ರೆಡ್ಡಿ ಕ್ವಾಡ್ರೈಸ್ಪ್ಸ್ ಗಾಯದಿಂದ ಚೇತರಿಸಿಕೊಳ್ಳುತ್ತಿತ್ತಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಸೋಮವಾರ ತಿಳಿಸಿದ್ದಾರೆ.
'ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಶಿವಂ ದುಬೆ ಅವರನ್ನು ಆಯ್ಕೆ ಸಮಿತಿ ಹೆಸರಿಸಿದೆ' ಎಂದು ಸೈಕಿಯಾ ಹೇಳಿದರು. ಚೆನ್ನೈನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದ ಸಮಯದಲ್ಲಿ ರೆಡ್ಡಿ ಗಾಯಗೊಂಡಿದ್ದು, ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳುವ ಸಮಯವನ್ನು ಇನ್ನೂ ನಿರ್ಧರಿಸಲಾಗಿಲ್ಲ.
ಪುನರ್ವಸತಿ ಪ್ರಕ್ರಿಯೆಯಿಂದಾಗಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿ ಹಾಗೂ ಮುಂಬರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದರು.
ಎರಡು ಬಾರಿ ಟಿ20 ವಿಶ್ವಕಪ್ ವಿಜೇತ ದುಬೆ, ಇದುವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು 43 ರನ್ ಗಳಿಸಿದ್ದಾರೆ ಮತ್ತು ಒಂದು ವಿಕೆಟ್ ಪಡೆದಿದ್ದಾರೆ. ಅವರು ಕೊನೆಯ ಬಾರಿಗೆ ಆಗಸ್ಟ್ 2024 ರಲ್ಲಿ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಸರಣಿಯ ಉದ್ಘಾಟನಾ ಪಂದ್ಯದ ನಂತರ, ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾರ್ಡಿಫ್ (ಜುಲೈ 16) ಮತ್ತು ಲಾರ್ಡ್ಸ್ (ಜುಲೈ 19) ನಲ್ಲಿ ಮುಂದಿನ ಪಂದ್ಯಗಳನ್ನು ಆಡಲಿವೆ. ಸರಣಿ ಮುಗಿದ ನಂತರ, ದುಬೆ ಜಿಂಬಾಬ್ವೆಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಜುಲೈ 23 ರಂದು ಮೊದಲ ಟಿ20ಐ ಆರಂಭವಾಗುತ್ತದೆ. ನಂತರ ಜುಲೈ 25 ಮತ್ತು 26 ರಂದು ಪಂದ್ಯಗಳು ನಡೆಯಲಿದ್ದು, ಇವೆಲ್ಲವೂ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯಲಿವೆ.
ಭಾರತದ ನವೀಕರಿಸಿದ ಏಕದಿನ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂದುಬೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


