ಕ್ರಿಕೆಟ್

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ 12 ನೇ ಆಟಗಾರ್ತಿ ಮತ್ತು ದೇಶದ ಮೂರನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ
ಸ್ಮೃತಿ ಮಂಧಾನಾ
Published On :

ಲಾರ್ಡ್ಸ್: ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಕ್ರಿಕೆಟ್ ಕಾಶಿ ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ತಮ್ಮ 300ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವ ಮೂಲಕ ವೃತ್ತಿಜೀವನದ ಮಹತ್ವದ ಮೈಲಿಗಲ್ಲನ್ನು ದಾಟಿದ್ದು, ಈ ಸಾಧನೆ ಮಾಡಿದ ಕಿರಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ 12 ನೇ ಆಟಗಾರ್ತಿ ಮತ್ತು ದೇಶದ ಮೂರನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಮಿಥಾಲಿ ರಾಜ್ 333 ಪಂದ್ಯಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಹರ್ಮನ್ ಪ್ರೀತ್ ಕೌರ್ 374 ಪಂದ್ಯಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

142 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲಾರ್ಡ್ಸ್‌ ಮೈದಾನದಲ್ಲಿ ಮಹಿಳಾ ಟೆಸ್ಟ್​ ಪಂದ್ಯವೊಂದು ನಡೆಯುತ್ತಿದೆ.

ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದ್ದ ಭಾರತದ ವನಿತಾ ಪಡೆ ಇದೀಗ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಭಾರತದ ಉಪನಾಯಕಿ ಸ್ಮೃತಿ ಮಂಧಾನಾ ಆಕರ್ಷಕ ಅರ್ಧ ಶತಕ ಸಿಡಿಸಿದ್ದಾರೆ.

9 ಬೌಂಡರಿ ಹಾಗೂ ಒಂದು ಸಿಕ್ಸರ್ ನೊಂದಿಗೆ 66 ರನ್ ಸಿಡಿಸಿ ಸ್ಮೃತಿ ಮಂಧಾನಾ ಭಾರತದ ಸ್ಕೋರ್ ಹೆಚ್ಚಾಗಲು ನೆರವಾಗಿದ್ದಾರೆ. ಇದಕ್ಕೂ ಮುನ್ನಾ ಶಫಾಲಿ ವರ್ಮಾ ಶೂನ್ಯಕ್ಕೆ ಔಟಾದರೆ, ಯಸ್ತಿಕಾ ಭಾಟಿಯಾ 12 ಹಾಗೂ ರೋಡ್ರಿಗೇಸ್ 35 ರನ್ ಗಳಿಗೆ ಔಟಾಗಿದ್ದು, ನಾಯಕಿ ಹರ್ಮನ್ ಪ್ರೀತ್ ಕೌರ್ ಅವರೊಂದಿಗೆ ಸ್ಮೃತಿ ಮಂಧಾನಾ ಆಟ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.