ಕ್ರಿಕೆಟ್

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು
Published On :

ಸೌತಾಂಪ್ಟನ್‌: ಇಂಗ್ಲೆಂಡ್​ನ ಸೌತಾಂಪ್ಟನ್‌ನಲ್ಲಿ ಶನಿವಾರ ನಡೆದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್, ಭಾರತದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವೈಟ್‌ವಾಶ್ ಮಾಡಿದೆ.

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌, ಇಂಗ್ಲೆಂಡ್ ಪರ ಜೋಸ್ ಬಟ್ಲರ್ 64 ಎಸೆತಗಳಲ್ಲಿ 12 ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ಗಳೊಂದಿಗೆ 131 ರನ್ ಗಳಿಸಿದ್ರೆ, ಹ್ಯಾರಿ ಬ್ರೂಕ್ 45 ಎಸೆತಗಳಲ್ಲಿ 4 ಬೌಂಡರಿ 8 ಸಿಕ್ಸರ್​​​ ಬಾರಿಸಿ 95 ರನ್​ ಗಳಿಸುವ ಮೂಲಕ ತಂಡ 258 ರನ್ ಗಳ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

ಗೆಲುವಿಗೆ 259 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 201 ರನ್ ಗಳಿಸಲಷ್ಟೇ ಶಕ್ತವಾಯಿತು. ಇದೊರೊಂದಿಗೆ ಹಾಲಿ ಚಾಂಪಿಯನ್‌ ಭಾರತದ ವಿರುದ್ಧ ಇಂಗ್ಲೆಂಡ್ 56 ರನ್ ಗಳ ಭರ್ಜರಿ ಗೆಲುವು ಸಾಧಿಸಿತು.

ಭಾರತದ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್(27), ಅಭಿಷೇಕ್ ಶರ್ಮಾ(3), ಹಾಗೂ ಇಶಾನ್ ಕಿಶನ್ 56 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 28 ಮತ್ತು ತಿಲಕ್ ವರ್ಮಾ ಅವರು 53 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.