ಲಾರ್ಡ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ವನಿತೆಯರು: 142 ವರ್ಷಗಳಷ್ಟು ಹಳೆಯ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ!
ಲಾರ್ಡ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದೆ. 142 ವರ್ಷಗಳಷ್ಟು ಹಳೆಯದಾದ ಈ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯ ಇದಾಗಿತ್ತು.

ಲಾರ್ಡ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದೆ. 142 ವರ್ಷಗಳಷ್ಟು ಹಳೆಯದಾದ ಈ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯ ಇದಾಗಿದ್ದು, ಭಾರತ ತಂಡವು ಇಂಗ್ಲೆಂಡ್‌ಗೆ 457 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ನಾಲ್ಕನೇ ದಿನದಂದು ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡವು ಆಲೌಟ್ ಆಗಿ ಭಾರತ ಐತಿಹಾಸಿಕ ಗೆಲುವು ದಾಖಲಿಸಿತು.
* ಲಾರ್ಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇತಿಹಾಸ ಸೃಷ್ಟಿಸಿದೆ.
* ಲಾರ್ಡ್ಸ್‌ನ 142 ವರ್ಷಗಳ ಇತಿಹಾಸದಲ್ಲಿ ಇದು ಮೊದಲ ಮಹಿಳಾ ಟೆಸ್ಟ್ ಪಂದ್ಯವಾಗಿತ್ತು.
* ಲಾರ್ಡ್ಸ್‌ನಲ್ಲಿ ಯಸ್ತಿಕಾ ಶರ್ಮಾ ಮೊದಲ ಮಹಿಳಾ ಟೆಸ್ಟ್ ಶತಕ ಗಳಿಸಿದರು.
* ಕ್ರಾಂತಿ ಗೌರ್ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಗೆಲುವಿಗೆ ಅಡಿಪಾಯ ಹಾಕಿದರು.
ಲಾರ್ಡ್ಸ್ ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 285 ರನ್ ಪೇರಿಸಿತು. ತಂಡದ ಪರ ಸ್ಮೃತಿ ಮಂಧಾನ 83 ರನ್‌ಗಳ ಇನ್ನಿಂಗ್ಸ್ ಆಡಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 58 ರನ್ ಮತ್ತು ದೀಪ್ತಿ ಶರ್ಮಾ 57 ರನ್‌ಗಳ ಕಾಣಿಕೆ ನೀಡಿದರು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಕೇವಲ 170 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಆಮಿ ಜೋನ್ಸ್ 52 ರನ್‌ಗಳ ಇನ್ನಿಂಗ್ಸ್ ಆಡಿದರೆ, ನಾಯಕಿ ನ್ಯಾಟ್ ಸ್ಕೈವರ್-ಬ್ರಂಟ್ 44 ರನ್‌ಗಳ ಕಾಣಿಕೆ ನೀಡಿದರು. ಟೀಂ ಇಂಡಿಯಾ ಪರ ಕ್ರಾಂತಿ ಗೌಡ್ 37 ರನ್ ನೀಡಿ 5 ವಿಕೆಟ್ ಪಡೆದರೆ, ಸಯಾಲಿ ಸತ್ಘರೆ ಮತ್ತು ಸ್ನೇಹ್ ರಾಣಾ ತಲಾ 2 ವಿಕೆಟ್ ಪಡೆದರು.
ಮೊದಲ ಇನ್ನಿಂಗ್ಸ್‌ನಲ್ಲಿ 115 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಅನ್ನು 341 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಎರಡನೇ ಇನ್ನಿಂಗ್ಸ್ನಲ್ಲೂ ಸ್ಮೃತಿ ಮಂಧಾನ 70 ರನ್‌ಗಳ ಇನ್ನಿಂಗ್ಸ್ ಆಡಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬಂದ ಯಾಸ್ತಿಕಾ ಭಾಟಿಯಾ ಸ್ಮರಣೀಯ ಶತಕ ಸಿಡಿಸಿ ಮಿಂಚಿದರು. ಯಾಸ್ತಿಕಾ ಭಾಟಿಯಾ 158 ಎಸೆತಗಳಲ್ಲಿ 113 ರನ್ ಬಾರಿಸಿದರೆ, ವಿಕೆಟ್ ಕೀಪರ್ ರಿಚಾ ಘೋಷ್ 52 ಎಸೆತಗಳಲ್ಲಿ 50 ರನ್ ಗಳಿಸಿದರು.
ಇಂಗ್ಲೆಂಡ್‌ಗೆ ಗೆಲ್ಲಲು 457 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗ ಮತ್ತೆ ವೈಫಲ್ಯ ಕಂಡಿದ್ದು 186 ರನ್ ಗಳಿಗೆ ಆಲೌಟ್ ಆಯಿತು. ಪರಿಣಾಮ ಭಾರತ 270 ರನ್ ಗಳಿಂದ ಅಮೋಘ ಜಯ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



