CJP ಪ್ರತಿಭಟನೆ: ಸಂಯಮ ಕಾಯ್ದುಕೊಳ್ಳುವುದು, ಸರ್ಕಾರದ ಮೇಲೆ ನಂಬಿಕೆ ಇಡುವುದು ಮುಖ್ಯ- ಶಿಖರ್ ಧವನ್!
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ನಡೆಯುತ್ತಿರುವ ಪ್ರತಿಭಟನೆಯ ಕುರಿತು ಮೊದಲ ಪ್ರತಿಕ್ರಿಯೆ ನೀಡಿದರು. ಯುವಜನತೆಯ ಭವಿಷ್ಯಕ್ಕೆ ಧಕ್ಕೆ ತರುವ ಕೃತ್ಯಗಳಲ್ಲಿ ತೊಡಗಿರುವವರನ್ನು 'ಬಿಡುವುದಿಲ್ಲ' ಎಂದರು.

NEET ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಗಳು ನಡೆಯುತ್ತಿರುವಾಗ, ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಹಾಗೂ ದೇಶದ ಸಂಸ್ಥೆಗಳು ಮತ್ತು ಸರ್ಕಾರದ ಮೇಲೆ ವಿಶ್ವಾಸವಿಡುವಂತೆ ಶಿಖರ್ ಧವನ್ ಕರೆ ನೀಡಿದ್ದಾರೆ. ಯುವ ವಿದ್ಯಾರ್ಥಿಗಳ ಆಶೋತ್ತರಗಳು ಮತ್ತು ಆತಂಕಗಳನ್ನು ಪರಿಗಣಿಸಬೇಕು, ಆದರೆ ಕಠಿಣ ಸನ್ನಿವೇಶಗಳಲ್ಲಿ ತಾಳ್ಮೆಯಿಂದ ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂಬ ನಂಬಿಕೆಯೊಂದಿಗೆ ನಿಭಾಯಿಸಬೇಕು ಎಂದು ಅವರು ಹೇಳಿದರು.
'ನಮ್ಮ ಯುವಜನರೇ ದೇಶದ ಭವಿಷ್ಯ. ಅವರ ಕನಸುಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯ, ಆದರೆ ಅದೇ ಸಮಯದಲ್ಲಿ, ಕಷ್ಟದ ಸಂದರ್ಭಗಳಲ್ಲಿ ತಾಳ್ಮೆ ವಹಿಸುವುದು ಹಾಗೂ ದೇಶದ ಸಂಸ್ಥೆಗಳು ಮತ್ತು ಸರ್ಕಾರದ ಮೇಲೆ ನಂಬಿಕೆ ಇಡುವುದು ಕೂಡ ಅಷ್ಟೇ ಮುಖ್ಯ. ಪ್ರತಿಯೊಂದು ಸವಾಲಿಗೂ ತಾಳ್ಮೆಯೇ ಪರಿಹಾರ ಎಂದು ನಾನು ನಂಬುತ್ತೇನೆ. ಭಾರತವು ಯಾವಾಗಲೂ ಮುನ್ನಡೆದಿದೆ ಮತ್ತು ಮುಂದೆಯೂ ಮುನ್ನಡೆಯುತ್ತಲೇ ಇರುತ್ತದೆ' ಎಂದು ಧವನ್ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ನಡೆಯುತ್ತಿರುವ ಪ್ರತಿಭಟನೆಯ ಕುರಿತು ಮೊದಲ ಪ್ರತಿಕ್ರಿಯೆ ನೀಡಿದರು.
ಯುವಜನತೆಯ ಭವಿಷ್ಯಕ್ಕೆ ಧಕ್ಕೆ ತರುವ ಕೃತ್ಯಗಳಲ್ಲಿ ತೊಡಗಿರುವವರನ್ನು 'ಬಿಡುವುದಿಲ್ಲ'. ಅಲ್ಲದೆ, ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಾಜಿ ಭಾರತೀಯ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
'ಪ್ರತಿಯೊಬ್ಬ ಮಗು, ವಿದ್ಯಾರ್ಥಿ, ಮಹಿಳೆ ಮತ್ತು ಪುರುಷರಿಗೆ: ನೀವು ಶಾಂತಿಯುತವಾಗಿ ಕಲಿಯಲು, ಸುರಕ್ಷಿತವಾಗಿ ಬೆಳೆಯಲು ಮತ್ತು ನಿಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಅರ್ಹರಿದ್ದೀರಿ. ನಿಮ್ಮ ಕ್ಷೇಮವೇ ಉಜ್ವಲ ಭಾರತದ ಅಡಿಪಾಯವಾಗಿದೆ. ಕಾಳಜಿ, ಅವಕಾಶ ಮತ್ತು ಭರವಸೆಯುಳ್ಳ ಸಮಾಜವನ್ನು ಕಟ್ಟಲು ನಾವೆಲ್ಲರೂ ಒಗ್ಗೂಡೋಣ. ಮಾತುಕತೆಯ ಮೂಲಕ ಭಾರತದ ಭವಿಷ್ಯಕ್ಕಾಗಿ ನಾವು ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಬಹುದು' ಎಂದು ಯುವರಾಜ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



