ಕ್ರಿಕೆಟ್

ICC T20 Ranking: ಜಿಂಬಾಬ್ವೆ ಸರಣಿ ನಂತರ ಬರೋಬ್ಬರಿ 230 ಸ್ಥಾನ ಮೇಲೇರಿದ ವೈಭವ್ ಸೂರ್ಯವಂಶಿ

ಮತ್ತೊಂದೆಡೆ, ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶಾನ್ ಅವರು ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ICC T20 Ranking: ಜಿಂಬಾಬ್ವೆ ಸರಣಿ ನಂತರ ಬರೋಬ್ಬರಿ 230 ಸ್ಥಾನ ಮೇಲೇರಿದ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ
Published On :

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಬಿಡುಗಡೆ ಮಾಡಿದ ಶ್ರೇಯಾಂಕಗಳ ಪ್ರಕಾರ, ಭಾರತದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಟಿ20 ರ್ಯಾಂಕಿಂಗ್‌ನಲ್ಲಿ ಬರೋಬ್ಬರಿ 230 ಸ್ಥಾನ ಮೇಲೇರಿ 48ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ವೈಭವ್ ಸೂರ್ಯವಂಶಿ 536 ರೇಟಿಂಗ್ ಅಂಕಗಳೊಂದಿಗೆ ವಿಶ್ವದ 48ನೇ ಶ್ರೇಯಾಂಕದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು ಮೊದಲ ಬಾರಿಗೆ ಅಗ್ರ 50 ರಲ್ಲಿ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಂಬಾಬ್ವೆ ವಿರುದ್ಧದ ಇತ್ತೀಚಿನ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ವೈಭವ್, ಮೂರು ಪಂದ್ಯಗಳ ಸರಣಿಯಲ್ಲಿ 50.33 ರ ಸರಾಸರಿಯಲ್ಲಿ 151 ರನ್ ಗಳಿಸಿದ್ದರು.

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮೊದಲು ವೈಭವ್ ಸೂರ್ಯವಂಶಿ 278 ನೇ ಸ್ಥಾನದಲ್ಲಿದ್ದರು. ಆದರೆ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳಲ್ಲಿ ವೈಭವ್ ಎರಡು ಅರ್ಧಶತಕಗಳು ಸೇರಿದ್ದಂತೆ ಬರೋಬ್ಬರಿ 151 ರನ್‌ ಕಲೆಹಾಕಿದ್ದರು. ಇದರ ಫಲವಾಗಿ ವೈಭವ್ 536 ರೇಟಿಂಗ್ ಪಾಯಿಂಟ್‌ಗಳೊಂದಿಗೆ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮತ್ತೊಂದೆಡೆ, ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶಾನ್ ಅವರು ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 910 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿರುವ ಇಶಾನ್, ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾನ್(848 ಅಂಕಗಳು) ಗಿಂತ ಮುಂದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದ ನಂತರ, ಇಶಾನ್ 916 ರೇಟಿಂಗ್ ಪಾಯಿಂಟ್‌ಗಳನ್ನು ತಲುಪಿದ್ದರು. ಆ ಸಮಯದಲ್ಲಿ, ಅವರು ತಮ್ಮ ವೃತ್ತಿಜೀವನದ ಅತ್ಯುತ್ತಮ T20 ರೇಟಿಂಗ್ ಆಧಾರದ ಮೇಲೆ ವಿರಾಟ್ ಕೊಹ್ಲಿ (909 ಅಂಕಗಳು) ಮತ್ತು ಸೂರ್ಯಕುಮಾರ್ ಯಾದವ್ (912 ಅಂಕಗಳು) ಅವರನ್ನು ಹಿಂದಿಕ್ಕಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.