ಕ್ರಿಕೆಟ್

IPL 2026: 2ನೇ ಬಾರಿ ಚಾಂಪಿಯನ್ ಆದ ಬೆನ್ನಲ್ಲೇ RCBಗೆ ಬಿಗ್ ಶಾಕ್; ಸ್ಫೋಟಕ ಬ್ಯಾಟರ್​​ಗೆ ನಿಷೇಧದ ಶಿಕ್ಷೆ!

ಮೊದಲ ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ಅಂಪೈರ್ ನಿತಿನ್ ಮೆನನ್ ಅವರ ಕಡೆಗೆ ಆಕ್ರಮಣಕಾರಿಯಾಗಿ ಐಸ್ ಬ್ಯಾಗ್ ಎಸೆದಿದ್ದಕ್ಕಾಗಿ ಟಿಮ್ ಡೇವಿಡ್ ಅವರನ್ನು ಒಂದು ಪಂದ್ಯಕ್ಕೆ ನಿಷೇಧಿಸಲಾಗಿದೆ.

IPL 2026: 2ನೇ ಬಾರಿ ಚಾಂಪಿಯನ್ ಆದ ಬೆನ್ನಲ್ಲೇ RCBಗೆ ಬಿಗ್ ಶಾಕ್; ಸ್ಫೋಟಕ ಬ್ಯಾಟರ್​​ಗೆ ನಿಷೇಧದ ಶಿಕ್ಷೆ!
ಟಿಮ್ ಡೇವಿಡ್
Published On :

ಮುಂಬೈ: ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ.

2ನೇ ಬಾರಿ ಚಾಂಪಿಯನ್ ಆದ ಬೆನ್ನಲ್ಲೇ, ಫೈನಲ್ ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಹಂತ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಆರ್ ಸಿಬಿಯ ಸ್ಫೋಟಕ ಬ್ಯಾಟ್ಸ್‌ಮನ್ ಟಿಮ್ ಡೇವಿಡ್‌ ಅವರಿಗೆ ಪಂದ್ಯ ಶುಲ್ಕದ ಶೇಕಡಾ 50 ರಷ್ಟು ದಂಡ ಮತ್ತು ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಮೊದಲ ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ಅಂಪೈರ್ ನಿತಿನ್ ಮೆನನ್ ಅವರ ಕಡೆಗೆ ಆಕ್ರಮಣಕಾರಿಯಾಗಿ ಐಸ್ ಬ್ಯಾಗ್ ಎಸೆದಿದ್ದಕ್ಕಾಗಿ ಟಿಮ್ ಡೇವಿಡ್ ಅವರನ್ನು ಒಂದು ಪಂದ್ಯಕ್ಕೆ ನಿಷೇಧಿಸಲಾಗಿದೆ. ಈ ಕಠಿಣ ನಿರ್ಧಾರದ ನಂತರ, ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಐಪಿಎಲ್ 2027ರ ಮೊದಲ ಪಂದ್ಯದಲ್ಲಿ ಮೈದಾನಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ.

ಡೇವಿಡ್ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಇದು "ಪಂದ್ಯದ ಸಮಯದಲ್ಲಿ ಆಟಗಾರ, ತಂಡದ ಅಧಿಕಾರಿ, ಅಂಪೈರ್, ಮ್ಯಾಚ್ ರೆಫರಿ ಅಥವಾ ಯಾವುದೇ ಇತರ ಮೂರನೇ ವ್ಯಕ್ತಿಯ ಮೇಲೆ ಅನುಚಿತ ಅಥವಾ ಅಪಾಯಕಾರಿ ರೀತಿಯಲ್ಲಿ ಚೆಂಡನ್ನು (ಅಥವಾ ನೀರಿನ ಬಾಟಲಿಯಂತಹ ಕ್ರಿಕೆಟ್ ಉಪಕರಣಗಳ ಯಾವುದೇ ವಸ್ತು) ಎಸೆಯುವುದಕ್ಕೆ ಸಂಬಂಧಿಸಿದೆ."

ಐಪಿಎಲ್ ಆಡಳಿತ ಮಂಡಳಿ ಇಂದು ಅಧಿಕೃತವಾಗಿ ಈ ಕ್ರಮವನ್ನು ಪ್ರಕಟಿಸಿದ್ದು, ಟಿಮ್ ಡೇವಿಡ್ ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥನೆಂದು ಕಂಡುಬಂದಿದೆ ಎಂದು ತಿಳಿಸಿದೆ. ಶಿಕ್ಷೆಯಾಗಿ, ಅವರ ಪಂದ್ಯ ಶುಲ್ಕದ 50 ಪ್ರತಿಶತ ದಂಡ ವಿಧಿಸಲಾಗಿದೆ ಮತ್ತು ಅವರ ಖಾತೆಗೆ ಎರಡು ಡಿಮೆರಿಟ್ ಅಂಕಗಳನ್ನು ಸೇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.