IPL 2026: ದೊಡ್ಡ ಸಿಂಹಗಳು ಜೋರಾಗಿ ಗರ್ಜಿಸಿವೆ; RCB ಗೆಲುವಿನ ಬಗ್ಗೆ ವಿಜಯ್ ಮಲ್ಯ!
ನಮ್ಮ ದೊಡ್ಡ ಸಿಂಹಗಳು ಜೋರಾಗಿ ಘರ್ಜಿಸಿ ನಮ್ಮೆಲ್ಲರನ್ನೂ ಹೆಮ್ಮೆಪಡುವಂತೆ ಮಾಡಿವೆ. ಅತ್ಯುತ್ತಮವಾಗಿ ಆಡಿದ್ದೀರಿ (Very well done you beauties)ಎಂದು ಹೇಳಿದ್ದಾರೆ.

ಲಂಡನ್: ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನ್ನು 5 ವಿಕೆಟ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ RCBಗೆ ಅದರ ಮಾಜಿ ಮಾಲೀಕ ವಿಜಯ್ ಮಲ್ಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಆರ್‌ಸಿಬಿ, ಆರ್‌ಸಿಬಿ… ಬ್ಯಾಕ್ ಟು ಬ್ಯಾಕ್ ಐಪಿಎಲ್ ಚಾಂಪಿಯನ್ ಗೆ ಅಭಿನಂದನೆಗಳು. ನಮ್ಮ ದೊಡ್ಡ ಸಿಂಹಗಳು ಜೋರಾಗಿ ಘರ್ಜಿಸಿ ನಮ್ಮೆಲ್ಲರನ್ನೂ ಹೆಮ್ಮೆಪಡುವಂತೆ ಮಾಡಿವೆ. ಅತ್ಯುತ್ತಮವಾಗಿ ಆಡಿದ್ದೀರಿ (Very well done you beauties)ಎಂದು ಹೇಳಿದ್ದಾರೆ.
ಗುಜರಾತ್ ನೀಡಿದ 156 ರನ್ ಗಳ ಗುರಿ ಬೆನ್ನಟ್ಟಿದ್ದ ಆರ್ ಸಿಬಿ ಪರ ಕೊಹ್ಲಿ 42 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳೊಂದಿಗೆ ಅಜೇಯ 75 ರನ್ ಗಳಿಸುವುದರೊಂದಿಗೆ ಆರ್‌ಸಿಬಿ 18 ಓವರ್‌ಗಳಲ್ಲಿ ಐದು ವಿಕೆಟ್‌ಗೆ 161 ರನ್ ಗಳಿಸಿ ಸುಲಭವಾಗಿ ಗೆಲುವು ಸಾಧಿಸಿತು.
ಆರ್‌ಸಿಬಿ ನಾಯಕ ರಜತ್ ಪಟಿದಾರ್ ತಮ್ಮ ತಂಡದ ಎರಡನೇ ಐಪಿಎಲ್ ಟ್ರೋಫಿಯನ್ನು ಕಳೆದ ವರ್ಷ ಕಾಲ್ತುಳಿತದಲ್ಲಿ ಮಡಿದ ಅಭಿಮಾನಿಗಳಿಗೆ ಅರ್ಪಿಸಿದರು. ಕಳೆದ ವರ್ಷ ಜೂನ್‌ನಲ್ಲಿ ಆರ್‌ಸಿಬಿ ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ ಆತುರದಿಂದ ಆಯೋಜಿಸಲಾದ ವಿಜಯೋತ್ಸವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



