ಕ್ರಿಕೆಟ್

IPL 2026: ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮಸ್ತ್ ಡ್ಯಾನ್ಸ್! Video ವೈರಲ್

ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

IPL 2026: ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮಸ್ತ್ ಡ್ಯಾನ್ಸ್! Video ವೈರಲ್
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Published On :

ಅಹಮದಾಬಾದ್‌: ಗುಜರಾತ್ ನ ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡ ಬಳಿಕ ಆರ್ ಸಿಬಿ ಆಟಗಾರರು ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ.

ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಜತ್ ಪಟಿದಾರ್ ನೇತೃತ್ವದ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಐದು ವಿಕೆಟ್‌ಗಳ ಸುಲಭ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತು.

ಕೊಹ್ಲಿ ಅಜೇಯ 75 ರನ್ ಗಳಿಸುವ ಮೂಲಕ ಆರ್‌ಸಿಬಿ ಕೇವಲ 18 ಓವರ್‌ಗಳಲ್ಲಿ 156 ರನ್‌ಗಳ ಗುರಿ ತಲುಪಲು ನೆರವಾದರು. ಈ ಮೂಲಕ ತಂಡ ಮತ್ತೆ ಟ್ರೋಫಿ ಎತ್ತಿಹಿಡಿಯುವಲ್ಲಿ ಮಹತ್ವದ ಕೊಡುಗೆ ನೀಡಿದರು.

ಈ ಗೆಲುವಿನ ಬಳಿಕ RCB ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ದಿನೇಶ್ ಕಾರ್ತಿಕ್ ಮತ್ತಿತರ ತಂಡದ ಆಟಗಾರರೊಂದಿಗೆ ಕುಣಿದು ಕುಪ್ಪಳಿಸಿರುವುದು ಕಂಡುಬಂದಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.