ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ ಬದಲು ಗಾಯಕ್ವಾಡ್ ಆಯ್ಕೆ ಸಾಧ್ಯತೆ; ರಜತ್ ಪಾಟಿದಾರ್ಗೂ ಸ್ಥಾನ?
ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ರಜತ್ ಪಾಟಿದಾರ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ಮುಂಬೈ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಗಾಯದಿಂದಾಗಿ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಆಗಿದೆ.
ಜೂನ್ 14 ರಂದು ಆರಂಭವಾಗಲಿರುವ ಅಫ್ಘಾನ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬದಲಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಅಲ್ಲದೆ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ರಜತ್ ಪಾಟಿದಾರ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.
ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ವರದಿಯ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಅಫ್ಘಾನಿಸ್ತಾನ ಸರಣಿಯಲ್ಲಿ ಕೊಹ್ಲಿ ಬದಲಿಗೆ ಆಡುವ ಸಾಧ್ಯತೆಯಿದೆ.
ಗಾಯಕ್ವಾಡ್ ಶ್ರೀಲಂಕಾಕ್ಕೆ ಪ್ರಯಾಣಿಸುವ ಭಾರತ ಎ ತಂಡದ ಭಾಗವಾಗಲಿದ್ದಾರೆ. ಅಲ್ಲದೆ ಅಫ್ಘಾನಿಸ್ತಾನ ಒಳಗೊಂಡ ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ಪ್ರಯಾಣಿಸಲಿರುವ ಭಾರತ ಎ ತಂಡಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಬಹುದು ಎಂದು ವರದಿ ತಿಳಿಸಿದೆ.
ಅಫ್ಘಾನ್ ವಿರುದ್ಧ ಮೂರು ಪಂದ್ಯಗಳ ಸರಣಿಯು ಜೂನ್ 13 ರಂದು ಧರ್ಮಶಾಲಾದಲ್ಲಿ ಆರಂಭವಾಗುತ್ತದೆ.
ಆರ್‌ಸಿಬಿ ಇತಿಹಾಸ ಬದಲಿಸಿದ ನಾಯಕ
ಹಲವು ವರ್ಷಗಳಿಂದ ಚಾಂಪಿಯನ್ ಪಟ್ಟಕ್ಕಾಗಿ ಕಾಯುತ್ತಿದ್ದ ಆರ್‌ಸಿಬಿ ತಂಡಕ್ಕೆ ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಡುವಲ್ಲಿ ರಜತ್ ಪಾಟಿದಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ. ಕೇವಲ ನಾಯಕತ್ವ ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲೂ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ ಅವರು, ಪ್ರಸಕ್ತ ಸೀಸನ್‌ನಲ್ಲಿ 192.69ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ ಬರೋಬ್ಬರಿ 501 ರನ್ ಚಚ್ಚಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಂಡ ಒತ್ತಡದಲ್ಲಿದ್ದಾಗಲೆಲ್ಲಾ ಜವಾಬ್ದಾರಿಯುತ ಹಾಗೂ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ಆರ್‌ಸಿಬಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಅವರು ಪ್ರಮುಖ ಕಪ್ತಾನನಾಗಿ ಹೊರಹೊಮ್ಮಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



