International Cricket: ಪಂದ್ಯವನ್ನೇ ಆಡದೇ 3 ದಶಕಗಳ ಹಳೆಯ ತೆಂಡೂಲ್ಕರ್ ದಾಖಲೆ ಮುರಿದ Vaibhav Sooryavanshi
ಐಪಿಎಲ್ 2026ರಲ್ಲಿ ಆರೆಂಜ್ ಕ್ಯಾಪ್ ಗೆದ್ದು ಸಂಚಲನ ಮೂಡಿಸಿದ್ದ ಈ ಯುವ ಬ್ಯಾಟರ್, ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ.

ನವದೆಹಲಿ: ಐಪಿಎಲ್ 2026ರಲ್ಲಿ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿರುವ ಬಿಹಾರದ 15 ವರ್ಷದ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿಗೆ ಈಗ ಭಾರತ ತಂಡದಿಂದ ಕರೆ ಬಂದಿದ್ದು, ಆ ಮೂಲಕ 37 ವರ್ಷಗಳ ಹಳೆಯ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಂತಾಗಿದೆ.
ಹೌದು.. ಭಾರತೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ 15 ವರ್ಷದ ವೈಭವ್ ಸೂರ್ಯವಂಶಿ ಸಾಕ್ಷಿಯಾಗಿದ್ದಾರೆ. ಐಪಿಎಲ್ 2026ರಲ್ಲಿ ಆರೆಂಜ್ ಕ್ಯಾಪ್ ಗೆದ್ದು ಸಂಚಲನ ಮೂಡಿಸಿದ್ದ ಈ ಯುವ ಬ್ಯಾಟರ್, ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್, ಕೇವಲ 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಮೂಲಕ, ಅತಿ ಕಿರಿಯ ವಯಸ್ಸಿನಲ್ಲಿ ಭಾರತದ ಹಿರಿಯ ಪುರುಷರ ತಂಡಕ್ಕೆ ಆಯ್ಕೆಯಾದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಂತೆಯೇ ಅತೀ ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಭಾರತದ ಮೊದಲ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
ಐಪಿಎಲ್ 2026ರಲ್ಲಿ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. 16 ಇನ್ನಿಂಗ್ಸ್‌ಗಳಲ್ಲಿ 776 ರನ್‌ಗಳನ್ನು 237.30ರ ಸ್ಟ್ರೈಕ್ ರೇಟ್‌ನಲ್ಲಿ ಕಲೆಹಾಕಿದ್ದ ಅವರು, ದಾಖಲೆಯ 72 ಸಿಕ್ಸರ್‌ಗಳನ್ನು ಸಿಡಿಸಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. ಅವರ ಸ್ಫೋಟಕ ಪ್ರದರ್ಶನವೇ ರಾಷ್ಟ್ರೀಯ ಆಯ್ಕೆದಾರರ ಗಮನ ಸೆಳೆದಿತ್ತು.
ಏಕ್ ಬಿಹಾರಿ, ಸಬ್ ಪೇ ಭಾರಿ
ವೈಭವ್ ಅವರ ಈ ಸಾಧನೆ ಕೇವಲ ವೈಯಕ್ತಿಕ ಯಶಸ್ಸಲ್ಲ, ಬಿಹಾರ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿಯೂ ಹೊಸ ಅಧ್ಯಾಯವನ್ನು ಬರೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು "ಏಕ್ ಬಿಹಾರಿ, ಸಬ್ ಪೇ ಭಾರಿ" ಎಂಬ ಘೋಷಣೆಯೊಂದಿಗೆ ಯುವ ಪ್ರತಿಭೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಕ್ರಿಕೆಟ್ ತಜ್ಞರ ಅಭಿಪ್ರಾಯದಂತೆ, ವೈಭವ್ ಸೂರ್ಯವಂಶಿಯಲ್ಲಿರುವ ಆಕ್ರಮಣಕಾರಿ ಆಟ, ಆತ್ಮವಿಶ್ವಾಸ ಮತ್ತು ಒತ್ತಡದ ಸಂದರ್ಭದಲ್ಲೂ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಅವರನ್ನು ಭಾರತದ ಮುಂದಿನ ತಲೆಮಾರಿನ ಪ್ರಮುಖ ಬ್ಯಾಟರ್‌ಗಳಲ್ಲಿ ಒಬ್ಬರನ್ನಾಗಿ ರೂಪಿಸುವ ಸಾಧ್ಯತೆ ಇದೆ.
ಇದೀಗ ಎಲ್ಲರ ಚಿತ್ತ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯತ್ತ ನೆಟ್ಟಿದ್ದು, ಭಾರತದ ನೀಲಿ ಜೆರ್ಸಿಯಲ್ಲಿ ವೈಭವ್ ಸೂರ್ಯವಂಶಿ ಯಾವ ರೀತಿಯ ಆರಂಭ ಮಾಡಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



