India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3
ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಚಂಡೀಗಢ: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದ್ದು, ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.
ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್ ಗೆ ಈ ಜೋಡಿ 41 ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ 24 ರನ್ ಗಳಿಸಿದ್ದ ಜೈಸ್ವಾಲ್ ಸಲೀಂ ಸಫಿ ಬೌಲಿಂಗ್ ನಲ್ಲಿ ಔಟಾದರು.
ಬಳಿಕ ರಾಹುಲ್ ಜೊತೆಗೂಡಿದ ಸಾಯಿ ಸುದರ್ಶನ್ ಭರ್ಜರಿ ಜೊತೆಯಾಟವಾಡಿದರು. ಕೆಎಲ್ ರಾಹುಲ್ ಮತ್ತು ಸಾಯಿ ಸುದರ್ಶನ್ ಜೋಡಿ 2ನೇ ವಿಕೆಟ್ ಗೆ ಬರೊಬ್ಬರಿ 139 ರನ್ ಗಳ ಜೊತೆಯಾಟವಾಡಿತು. ಈ ಪೈಕಿ ಕೆಎಲ್ ರಾಹುಲ್ ಶತಕ ಸಿಡಿಸಿ ಔಟಾದರೆ, ಸಾಯಿ ಸುದರ್ಶನ್ ಕೂಡ 81 ರನ್ ಗಳಿಸಿ ಶತಕದಂಚಿನಲ್ಲಿ ವಿಕೆಟ್ ಕೈ ಚೆಲ್ಲಿದರು.
ಬಳಿಕ ಕ್ರೀಸ್ ಗೆ ಬಂದ ನಾಯಕ ಶುಭ್ ಮನ್ ಗಿಲ್ ರಿಷಬ್ ಪಂತ್ ಜೊತೆಗೂ ಉತ್ತಮ ಬ್ಯಾಟಿಂಗ್ ನಡೆಸಿದರು. ಈ ಹಂತದಲ್ಲಿ ಗಿಲ್ ಅಜೇಯ 103 ರನ್ ಗಳಿಸಿದರೆ, ಉತ್ತಮ ಸಾಥ್ ನೀಡಿದ ಪಂತ್ ಅಜೇಯ 50 ರನ್ ಗಳಿಸಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಆ ಮೂಲಕ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.
ಇನ್ನು ಅಪ್ಘಾನಿಸ್ತಾನ ಪರ ಮಹಮದ್ ಸಲೀಂ ಸಫಿ 2 ವಿಕೆಟ್ ಪಡೆದರೆ, ರೆಹಮಾನ್ ಶರಿಫಿ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



