ವೈಭವ್ ಸೂರ್ಯವಂಶಿ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ಎಬಿ ಡಿವಿಲಿಯರ್ಸ್; ಇಲ್ಲಿದೆ ಕಾರಣ
ಟೀಂ ಇಂಡಿಯಾಗಾಗಿ ತಾನು ಮೂರು ಸ್ವರೂಪದ ಕ್ರಿಕೆಟ್ ಆಡಲು ಬಯಸುತ್ತೇನೆ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ. ಆದರೆ ಎಬಿ ಡಿವಿಲಿಯರ್ಸ್ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮುಂಬೈ: IPL 2026ರಲ್ಲಿ ಸ್ಫೋಟಕ ಬ್ಯಾಟಿಂಗ್ ನಿಂದ ಭಾರೀ ಸದ್ದು ಮಾಡಿದ ಹದಿನೈದು ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಟೆಸ್ಟ್ ಕ್ರಿಕೆಟ್ ಆಡುವ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ದಿಗ್ಗಜ ಎಬಿ ಡಿವಿಲಿಯರ್ಸ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾಗಾಗಿ ತಾನು ಮೂರು ಸ್ವರೂಪದ ಕ್ರಿಕೆಟ್ ಆಡಲು ಬಯಸುತ್ತೇನೆ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ. ಆದರೆ ಎಬಿ ಡಿವಿಲಿಯರ್ಸ್ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಿವಿಲಿಯರ್ಸ್, ವೈಭವ್ ಸೂರ್ಯವಂಶಿಗೆ ನಿಜವಾಗಿಯೂ ಟೆಸ್ಟ್ ಆಡುವ ಆಸೆಯಿದೆಯೇ? ಆತನ ಸಾಮರ್ಥ್ಯವಿದೆ ನಿಜ. ಆದರೆ ರೆಡ್-ಬಾಲ್ ಕ್ರಿಕೆಟ್ ಆಡಲು ಅತನಿಗೆ ನಿಜವಾಗಿಯೂ ಮನಸಿದೆಯೇ? ಈ ಬಗ್ಗೆ ನನಗೆ ಅನುಮಾವಿದೆ. ಇದಕ್ಕೆ ಕಾಲವೇ ಉತ್ತರಿಸಬೇಕು ಎಂದು ಹೇಳಿದ್ದಾರೆ.
ಡಿವಿಲಿಯರ್ಸ್ ಅನುಮಾನಕ್ಕೆ ಕಾರಣವೇನು?
ಇತ್ತೀಚಿಗೆ ಮುಕ್ತಾಯಗೊಂಡ ಐಪಿಎಲ್ 2026 ರಲ್ಲಿ ವೈಭವ್ ಸೂರ್ಯವಂಶಿ ಭರ್ಜರಿ ಯಶಸ್ಸು, ಹಣ ಮತ್ತು ಪ್ರಸಿದ್ಧಿಯನ್ನು ಗಳಿಸಿದ್ದಾರೆ. ಅದು ಸಹ ಅಲ್ಪಾವಧಿಯಲ್ಲಿ. ಆದರೆ ಟೆಸ್ಟ್ ಕ್ರಿಕೆಟ್ ಎಂಬುದು ಕಠಿಣ ಸವಾಲು. ಇಲ್ಲಿ ಗಂಟೆಗಟ್ಟಲೆ ಕ್ರೀಸ್‌ನಲ್ಲಿ ನಿಲ್ಲುವ ತಾಳ್ಮೆ, ರಕ್ಷಣಾತ್ಮಕ ಆಟ ಮತ್ತು ತಾಂತ್ರಿಕ ಶಿಸ್ತು ಅಗತ್ಯವಿರುತ್ತದೆ.
ಆದರೆ ವೈಭವ್ ಕೇವಲ ಟಿ20 ಶೈಲಿಯ ಬಿರುಸಿನ ಬ್ಯಾಟಿಂಗ್ ಮತ್ತು ಪವರ್-ಹಿಟ್ಟಿಂಗ್ ನೆಚ್ಚಿಕೊಂಡಿದ್ದಾರೆ. ಹೀಗಾಗಿ ಟೆಸ್ಟ್ ಕ್ರಿಕೆಟ್‌ನ ಹಾದಿ ಸುಲಭವಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗುವುದು ಕೂಡ ಸುಲಭದ ಮಾತಲ್ಲ. ಅದು ದೈಹಿಕ ಮತ್ತು ಮಾನಸಿಕವಾಗಿ ಕಠಿಣ ಸವಾಲುಗಳನ್ನು ತಂದೊಡ್ಡುತ್ತದೆ. ಕೇವಲ ಬಿರುಸಿನ ಬ್ಯಾಟಿಂಗ್‌ನಿಂದ ಅಲ್ಲಿ ಬದುಕುಳಿಯಲು ಸಾಧ್ಯವಿಲ್ಲ.
ಅಷ್ಟೇ ಅಲ್ಲದೆ ಈ ಹಿಂದೆ ಟಿ20 ಕ್ರಿಕೆಟ್‌ನಲ್ಲಿ ಸಿಡಿಲಬ್ಬರದ ಪ್ರದರ್ಶನ ನೀಡುತ್ತಿದ್ದ ಹಲವು ಆಟಗಾರರು ಟೆಸ್ಟ್ ಕ್ರಿಕೆಟ್ನಿಂದ ದೂರವೇ ಉಳಿದಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ಎಬಿಡಿ ವೈಭವ್ ಸೂರ್ಯವಂಶಿಯ ಟೆಸ್ಟ್ ಇಂಟ್ರೆಸ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


