T20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಗೆಲುವಿನ ತಂಡದ ರೂವಾರಿ ರೋಹಿತ್ ಶರ್ಮಾಗೆ ಜೂನ್ 23ಕ್ಕೆ 'ಪದ್ಮಶ್ರೀ' ಪ್ರಶಸ್ತಿ ಪ್ರದಾನ!
ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಜೂನ್ 23ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರೋಹಿತ್ ಶರ್ಮಾ ವೈಟ್-ಬಾಲ್ ಕ್ರಿಕೆಟ್‌ನಲ್ಲಿ (ಏಕದಿನ ಮತ್ತು ಟಿ20 ಸ್ವರೂಪಗಳು) ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು...

ನವದೆಹಲಿ: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಜೂನ್ 23ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರೋಹಿತ್ ಶರ್ಮಾ ವೈಟ್-ಬಾಲ್ ಕ್ರಿಕೆಟ್‌ನಲ್ಲಿ (ಏಕದಿನ ಮತ್ತು ಟಿ20 ಸ್ವರೂಪಗಳು) ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ರೋಹಿತ್ ಶರ್ಮಾ ಟಿ20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಗೆಲುವಿನ ಭಾರತೀಯ ತಂಡವನ್ನು ಮುನ್ನಡೆಸಿದ್ದರು. ಮಹೇಂದ್ರ ಸಿಂಗ್ ಧೋನಿ ನಂತರ ಎರಡನೇ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ.
2022ರ ಟಿ20 ವಿಶ್ವಕಪ್‌ನಲ್ಲೂ ರೋಹಿತ್ ನಾಯಕತ್ವ ವಹಿಸಿದ್ದರು. ಆದರೆ ಭಾರತ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ್ತಿತ್ತು. ಒಂದು ವರ್ಷದ ನಂತರ 50 ಓವರ್‌ಗಳ ವಿಶ್ವಕಪ್‌ನಲ್ಲಿ, ರೋಹಿತ್ ನೇತೃತ್ವದ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತು. ರೋಹಿತ್ ಟಿ20 ಕ್ರಿಕೆಟ್‌ನಲ್ಲಿ 159 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐದು ಶತಕಗಳು ಮತ್ತು 32 ಅರ್ಧಶತಕಗಳು ಸೇರಿದಂತೆ 4,231 ರನ್ ಗಳಿಸಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 282 ಪಂದ್ಯಗಳನ್ನು ಆಡಿದ್ದು 48 ಸರಾಸರಿಯಲ್ಲಿ 11,577 ರನ್ ಗಳಿಸಿದ್ದಾರೆ. ಇದರಲ್ಲಿ 33 ಶತಕಗಳು ಮತ್ತು 51 ಅರ್ಧಶತಕಗಳು ಸೇರಿವೆ. ಏಕದಿನ ಕ್ರಿಕೆಟ್ ನಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಗಳ ಸಿಡಿಸಿ ವೈಯಕ್ತಿಕ ದಾಖಲೆಯನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



