ಕ್ರಿಕೆಟ್

1st ODI: Shubman Gill, KL ರಾಹುಲ್ ಸ್ಫೋಟಕ ಬ್ಯಾಟಿಂಗ್; ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ

ಆಫ್ಘಾನಿಸ್ತಾನ ನೀಡಿದ್ದ 195 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 22.5 ನಲ್ಲಿ 3 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿ 7 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.

1st ODI: Shubman Gill, KL ರಾಹುಲ್ ಸ್ಫೋಟಕ ಬ್ಯಾಟಿಂಗ್; ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ
ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ
Published On :

ಧರ್ಮಶಾಲಾ: ನಾಯಕ ಶುಭ್ ಮನ್ ಗಿಲ್ ಮತ್ತು ಕನ್ನಡಿಗ ಕೆಎಲ್ ರಾಹುಲ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಆಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ ನೀಡಿದ್ದ 195 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 22.5 ನಲ್ಲಿ 3 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿ 7 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.

ಭಾರತದ ಪರ ನಾಯಕ ಶುಭ್ ಮನ್ ಗಿಲ್ ಅಜೇಯ 84 ರನ್ ಗಳಿಸಿ ಗೆಲುವಿನ ರೂವಾರಿಯಾದರು. ಗಿಲ್ ಕೇವಲ 66 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 84 ರನ್ ಕಲೆಹಾಕಿದರು.

ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದು ಸ್ಫೋಟಕ ಬ್ಯಾಟಿಂಗ್ ನಡೆಸಿದ ಕನ್ನಡಿಗ ಕೆಎಲ್ ರಾಹುಲ್ 19 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿ ನೆರವಿನಿಂದ ಅಜೇಯ 39 ರನ್ ಗಳಿಸಿ ಗಿಲ್ ಗೆ ಉತ್ತಮ ಸಾಥ್ ನೀಡಿದರು.

ಉಳಿದಂತೆ ರೋಹಿತ್ ಶರ್ಮಾ 16, ಇಶಾನ್ ಕಿಶನ್ 34 ಮತ್ತು ಶ್ರೇಯಸ್ ಅಯ್ಯರ್ 12 ರನ್ ಗಳಿಸಿದರು. ಅತ್ತ ಆಫ್ಘಾನಿಸ್ತಾನ ಪರ ಝಿಯಾ ಉರ್ ರೆಹಮಾನ್ ಶರಿಫಿ ಮತ್ತು ರಷೀದ್ ಖಾನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.