Women's T20 World Cup 2026: ಹರ್ಮನ್ ಪ್ರೀತ್ ಕೌರ್ ಐತಿಹಾಸಿಕ ಸಾಧನೆ; Mithali Raj ದಾಖಲೆ ಧ್ವಂಸ
ಇಂದು ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್‌ಗಳ ಸಿಡಿಸಿದ ದಾಖಲೆಗೆ ಪಾತ್ರರಾದರು.

ಬರ್ಮಿಂಗ್ ಹ್ಯಾಮ್: ಐಸಿಸಿ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಮಾಜಿ ನಾಯಕಿ ಮಿಥಾಲಿ ರಾಜ್ ಅವರ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ.
ಇಂದು ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್‌ಗಳ ಸಿಡಿಸಿದ ದಾಖಲೆಗೆ ಪಾತ್ರರಾದರು.
ಈ ದಾಖಲೆ ಈ ಹಿಂದೆ ಮಾಜಿ ನಾಯಕಿ ಹಾಗೂ ಭಾರತದ ಮಹಿಳಾ ಕ್ರಿಕೆಟ್ ದಂತಕಥೆ ಮಿಥಾಲಿ ರಾಜ್ ಹೆಸರಿನಲ್ಲಿತ್ತು. ಮಿಥಾಲಿ ಟಿ20 ವಿಶ್ವಕಪ್ ನಲ್ಲಿ ಒಟ್ಟು 726 ರನ್ ಸಿಡಿಸಿ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದ್ದ ಸಾಧನೆ ಮಾಡಿದರು. ಇದೀಗ ಹರ್ಮನ್ ಪ್ರೀತ್ ಕೌರ್ ಈ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಈ ಪಂದ್ಯಕ್ಕೂ ಮುನ್ನವೇ ಹರ್ಮನ್ ಪ್ರೀತ್ ಕೌರ್ ಅವರು ಮಿಥಾಲಿ ರಾಜ್ ದಾಖಲೆಯನ್ನು ಸಮಬಲಗೊಳಿಸಿದ್ದರು. ಅಂದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಹರ್ಮನ್ ಪ್ರೀತ್ ಕೌರ್ 726 ರನ್ ಗಳಿಸಿದ್ದರು. ಇಂದು ತಮ್ಮ ಮೊದಲ ರನ್ ಗಳಿಸುವ ಮೂಲಕ ಮಿಥಾಲಿ ದಾಖಲೆಯನ್ನು ಮುರಿದಿದ್ದಾರೆ.
ಪಾಕ್ ವಿರುದ್ಧದ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ 35 ಎಸೆತಗಳಲ್ಲಿ 36 ರನ್ ಗಳಿಸಿದ್ದು, ಅದರೊಂದಿಗೆ ಟಿ20 ವಿಶ್ವಕಪ್ ನಲ್ಲಿ ಒಟ್ಟಾರೆ ತಮ್ಮ ರನ್ ಗಳಿಕೆಯನ್ನು 762 ರನ್ ಗಳಿಗೆ ಏರಿಕೆ ಮಾಡಿಕೊಂಡಿದ್ದಾರೆ.
ಮಾತ್ರವಲ್ಲದೇ ಇದರ ಜೊತೆಗೆ, ಹರ್ಮನ್‌ಪ್ರೀತ್ ಕೌರ್ ಈಗಾಗಲೇ ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ್ತಿಯರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿರುವ ಮತ್ತೊಂದು ಮಹತ್ವದ ಸಾಧನೆಯನ್ನು ಈ ವರ್ಷ ಸಾಧಿಸಿದ್ದಾರೆ. ಈ ದಾಖಲೆ ಭಾರತದ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


