ಕ್ರಿಕೆಟ್

India vs Afghanistan 2nd ODI: 77 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿದ ಗಿಲ್; ಕೊಹ್ಲಿಯ ದೊಡ್ಡ ದಾಖಲೆ ಪುಡಿಪುಡಿ!

ಶುಭಮನ್ ಗಿಲ್ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ 19 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರ ದಾಖಲೆಯನ್ನು ಮುರಿದರು.

India vs Afghanistan 2nd ODI: 77 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿದ ಗಿಲ್; ಕೊಹ್ಲಿಯ ದೊಡ್ಡ ದಾಖಲೆ ಪುಡಿಪುಡಿ!
ಶುಭಮನ್ ಗಿಲ್
Published On :

ಲಖನೌ: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಅವರು 77 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿಯ ದೊಡ್ಡ ದಾಖಲೆಯನ್ನು ಪುಡಿಗಟ್ಟಿದರು.

ಇಂದು ಲಖನೌನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ, ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಅವರ ಭರ್ಜರಿ ಶತಕಗಳ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 367 ರನ್ ಕಲೆಹಾಕಿದ್ದು, ಅಫ್ಘಾನಿಸ್ತಾನ ವಿರುದ್ಧ 400 ಕ್ಕೂ ಹೆಚ್ಚು ರನ್ ಗಳಿಸುವ ಗುರಿಯನ್ನು ಹೊಂದಿದೆ.

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಅಬ್ಬರದ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು ಪೂರ್ಣಗೊಳಿಸಿದರು. ಮಾತ್ರವಲ್ಲದೆ ಇದು ನಾಯಕನಾದ ಬಳಿಕ ಗಿಲ್ ಅವರ ಮೊದಲ ಏಕದಿನ ಶತಕವಾಗಿದೆ.

ಅತಿ ಕಡಿಮೆ ಇನ್ನಿಂಗ್ಸ್ ನಲ್ಲಿ ಸಾವಿರ ರನ್

ಶುಭಮನ್ ಗಿಲ್ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ 19 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರ ದಾಖಲೆಯನ್ನು ಮುರಿದರು.

ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರು 24 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಗಳಿಸಿದ್ದರೆ, ನವಜೋತ್ ಸಿಂಗ್ ಸಿಧು ಹಾಗೂ ಶ್ರೇಯಸ್ ಅಯ್ಯರ್ ಅವರು 25 ಇನ್ನಿಂಗ್ಸ್ ನಲ್ಲಿ ಮತ್ತು ಇಶಾನ್ ಕಿಶನ್ 26 ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಗಳ ಗಡಿ ದಾಟಿದ್ದರು.

ನಾಯಕನಾಗಿಯೂ ವೇಗದ ಶತಕ

ಕೇವಲ 77 ಎಸೆತಗಳಲ್ಲಿ ಶತಕ ಪೂರೈಸಿದ ಶುಭಮನ್ ಗಿಲ್​ಗೆ ನಾಯಕನಾಗಿ ಇದು ಅತಿ ವೇಗದ ಏಕದಿನ ಶತಕವೂ ಆಗಿದೆ. ರೋಹಿತ್ ಶರ್ಮಾ ಭಾರತದ ನಾಯಕನಾಗಿ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ 63 ಎಸೆತಗಳಲ್ಲಿ ಈ ಮೈಲಿಗಲ್ಲು ದಾಟಿದ್ದರು. ಹಾಗೆಯೇ ವೀರೇಂದ್ರ ಸೆಹ್ವಾಗ್ 69 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಗಿಲ್ 77 ಎಸೆತಗಳಲ್ಲಿ ಶತಕ ತಲುಪುವ ಮೂಲಕ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.