3rd ODI: Dravid ದಾಖಲೆ ಸೇರಿ 2 ಅಪರೂಪದ Record ನಿರ್ಮಿಸಿದ ಹಿಟ್ ಮ್ಯಾನ್ Rohit Sharma
ಜೈಸ್ವಾಲ್ ಕೇವಲ 86 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 14 ಬೌಂಡರಿಗಳ ನೆರವಿನಿಂದ ಅಜೇಯ 110 ರನ್ ಗಳಿಸಿದರು. ಅವರೊಟ್ಟಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಕೂಡ 79 ರನ್ ಕಲೆಹಾಕಿದರು.

ಚೆನ್ನೈ: ಆಫ್ಘಾನಿಸ್ತಾನ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಅಮೋಘ ಆರಂಭ ಒದಗಿಸಿದ ರೋಹಿತ್ ಶರ್ಮಾ ತಮ್ಮ ಅರ್ಧಶತಕದ ಮೂಲಕವೇ 2 ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ 44.2 ಓವರ್ ನಲ್ಲಿ 218 ರನ್ ಗಳಿಸಿ ಆಲೌಟ್ ಆಯಿತು. ಆಫ್ಘಾನಿಸ್ತಾನ ನೀಡಿದ 219 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಭರ್ಜರಿ ಆರಂಭ ಒದಗಿಸಿದರು.
ಜೈಸ್ವಾಲ್ ಕೇವಲ 86 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 14 ಬೌಂಡರಿಗಳ ನೆರವಿನಿಂದ ಅಜೇಯ 110 ರನ್ ಗಳಿಸಿದರು. ಅವರೊಟ್ಟಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಕೂಡ 69 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 79 ರನ್ ಕಲೆಹಾಕಿದರು.
ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 170 ರನ್ ಪೇರಿಸಿತು. ಬಳಿಕ ರೋಹಿತ್ ಶರ್ಮಾ ಅಫ್ಘಾನಿಸ್ತಾನದ ಮಹಮದ್ ನಬಿ ಬೌಲಿಂಗ್ ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ವಿಕೆಟ್ ಕೈ ಚೆಲ್ಲಿದರು. ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್ ಗೆ ಬಂದ ಶ್ರೇಯಸ್ ಅಯ್ಯರ್ ಅಜೇಯ 20 ರನ್ ಗಳಿಸಿದರು.
ಅರ್ಧಶತಕ, ದ್ರಾವಿಡ್ ದಾಖಲೆ ಪತನ
ಇನ್ನು ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಜೈಸ್ವಾಲ್ ಜೋಡಿ 170 ರನ್ ಗಳ ಅಮೋಘ ಜೊತೆಯಾಟವಾಡಿತು. ಆ ಮೂಲಕ ರೋಹಿತ್ ಶರ್ಮಾ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ 4ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಇಂದಿನ ಪಂದ್ಯದ ಜೊತೆಯಾಟವೂ ಸೇರಿದಂತೆ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 71 ಬಾರಿ 100 ಅಥವಾ ಅದಕ್ಕಿಂತೃ ಹೆಚ್ಚು ರನ್ ಗಳ ಜೊತೆಯಾಟದಲ್ಲಿ ಪಾಲ್ಗೊಂಡಿದ್ದರು.
ಈ ಪಟ್ಟಿಯಲ್ಲಿ ಭಾರತದ ಸವ್ಯಸಾಚಿ ಆಟಗಾರ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು ಸಚಿನ್ ಒಟ್ಟು 99 ಬಾರಿ 100 ಅಥವಾ ಅದಕ್ಕಿಂತ ಹೆಚ್ಚು ರನ್ ಗಳ ಜೊತೆಯಾಟದಲ್ಲಿ ಪಾಲ್ಗೊಂಡಿದ್ದರು. ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ಕೊಹ್ಲಿ 86 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕ್ಕಿಪಾಂಟಿಂಗ್ ಇದ್ದು ಅವರು 72 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ.
Involved in most 100+ partnerships in ODIs
99 S Tendulkar
86 V Kohli
72 R Ponting
71 Rohit Sharma *
67 K Sangakkara
ಅತೀ ಹೆಚ್ಚು ಅರ್ಧಶತಕ
ಅಂತೆಯೇ ಇಂದು ರೋಹಿತ್ ಶರ್ಮಾ 69 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 79 ರನ್ ಕಲೆಹಾಕಿದರು. ಆ ಮೂಲಕ ತಮ್ಮ ಏಕದಿನ ವೃತ್ತಿ ಜೀವನದ 62ನೇ ಅರ್ಧಶತಕ ಸಿಡಿಸಿದರು. ಆ ಮೂಲಕ ಅತೀ ಹೆಚ್ಚು ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.
ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಸಚಿನ್ 154 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು 131 ಬಾರಿ ಈ ಸಾಧನೆ ಮಾಡಿದ್ದಾರೆ. 95 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ರೋಹಿತ್ ಶರ್ಮಾ ಇದೀಗ 3ನೇ ಸ್ಥಾನಕ್ಕೇರಿದ್ದು, 94 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿರುವ ರಾಹುಲ್ ದ್ರಾವಿಡ್ 4ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
Most 50+ scores for India in ODIs
154 S Tendulkar
131 V Kohli
95 Rohit Sharma *
94 R Dravid
93 S Ganguly
82 MS Dhoni
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



