Tri-Nation Series Final: 11 ಎಸೆತಗಳಲ್ಲೇ ಅರ್ಧಶತಕ, 6 ರನ್ ಅಂತರದಲ್ಲಿ ಶತಕ ಮಿಸ್; ಕೆಣಕಿದ್ದ ಲಂಕನ್ನರ ಬೆವರಿಳಿಸಿದ Vaibhav Sooryavanshi
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.

ಡಂಬುಲಾ: ತಮ್ಮನ್ನು ಸ್ಲೆಡ್ಜ್ ಮಾಡಿದ್ದ ಶ್ರೀಲಂಕಾ ಬೌಲರ್ ಗಳ ವಿರುದ್ಧ ಭಾರತದ ಬೇಬಿಬಾಸ್ ವೈಭವ್ ಸೂರ್ಯವಂಶಿ ತಮ್ಮ ವಿಶ್ವರೂಪ ತೋರಿದ್ದು, ಕೇವಲ 29 ಎಸೆತಗಳಲ್ಲಿ 94 ರನ್ ಸಿಡಿಸಿ ಕೂದಲೆಳೆ ಅಂತರದಲ್ಲೇ ವಿಶ್ವದಾಖಲೆ ಮಿಸ್ ಮಾಡಿಕೊಂಡಿದ್ದಾರೆ.
ಹೌದು.. ಶ್ರೀಲಂಕಾದ ಡಂಬುಲಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡದ ಬೌಲರ್ ಗಳನ್ನು ಭಾರತದ ವೈಭವ್ ಸೂರ್ಯವಂಶಿ ಇನ್ನಿಲ್ಲದಂತೆ ಕಾಡಿದ್ದಾರೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.
ಲಂಕಾದ ಬೌಲರ್ ಗಳನ್ನು ಮನಸೋ ಇಚ್ಚೆ ಥಳಿಸಿದ ವೈಭವ್ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು ಮಾತ್ರವಲ್ಲದೇ ಕೇವಲ 29 ಎಸೆತಗಳಲ್ಲಿ 94 ರನ್ ಸಿಡಿಸಿ, ಕೇವಲ 6 ರನ್ ಅಂತರದಲ್ಲಿ ಶತಕ ಕೂಡ ಮಿಸ್ ಮಾಡಿಕೊಂಡರು. ಅಲ್ಲದೆ ಕೂದಲೆಳೆ ಅಂತರದಲ್ಲೇ ವಿಶ್ವದಾಖಲೆ ಮಿಸ್ ಮಾಡಿಕೊಂಡಿದ್ದಾರೆ.
ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಸೂರ್ಯವಂಶಿ 29 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 94 ರನ್ ಸಿಡಿಸಿದರು. ಅವರಿಗೆ ಮತ್ತೋರ್ವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಉತ್ತಮ ಸಾಥ್ ನೀಡಿದರು. ಪ್ರಿಯಾಂಶ್ ಕೂಡ 29 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 39 ರನ್ ಕಲೆಹಾಕಿದರು. ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 132 ರನ್ ಗಳ ಜೊತೆಯಾಟವಾಡಿ ಭಾರತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿತು.
ವಿಶ್ವದಾಖಲೆ ಜಸ್ಟ್ ಮಿಸ್
ಅಂತೆಯೇ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ 94 ರನ್‌ಗಳಿಗೆ ಔಟಾಗುವುದರೊಂದಿಗೆ ವಿಶ್ವದಾಖಲೆ ನಿರ್ಮಿಸುವ ಅವಕಾಶ ಕೈತಪ್ಪಿತು.
ಕೇವಲ 15 ವರ್ಷದ ಸೂರ್ಯವಂಶಿ 29 ಎಸೆತಗಳಲ್ಲಿ ಸ್ಫೋಟಕ 94 ರನ್‌ಗಳನ್ನು ಸಿಡಿಸಿ ದಾಖಲೆ ಶತಕದತ್ತ ದಾಪುಗಾಲಿಟ್ಟಿದ್ದರು. ಆದರೆ 9ನೇ ಓವರ್ ನ 5ನೇ ಎಸೆತದಲ್ಲಿ ಶ್ರೀಲಂಕಾದ ಸಹನ್ ಅರಚ್ಚಿಗೆ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ವಿಯಸ್ಕಾಂತ್ ಗೆ ಕ್ಯಾಚ್ ನೀಡಿ ಔಟಾದರು.
ಒಂದು ವೇಳೆ ವೈಭವ್ ಇಂದು ಶತಕ ಸಿಡಿಸಿದ್ದರೆ ಅವರು ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮ್ಯಾಕ್‌ಗರ್ಕ್ ಅವರ ಹೆಸರಿನಲ್ಲಿರುವ ಅತಿವೇಗದ ಲಿಸ್ಟ್ 'ಎ' ಶತಕದ ದಾಖಲೆಯನ್ನು ಸರಿಗಟ್ಟುತ್ತಿದ್ದರು. ಆದರೆ, ಆ ಐತಿಹಾಸಿಕ ಸಾಧನೆ ಕೊನೆಯ ಕ್ಷಣದಲ್ಲಿ ಕೈತಪ್ಪಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



