ಕ್ರಿಕೆಟ್

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video

ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ದ್ರೌಪದಿ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ರೋಹಿತ್ ಶರ್ಮಾ
Published On :

ನವದೆಹಲಿ: ಭಾರತೀಯ ಕ್ರಿಕೆಟಿನಲ್ಲಿ ಮರೆಯಲಾಗದಂತಹ ಅದ್ಬುತ ಪ್ರದರ್ಶನ, ದಾಖಲೆಗಳು ಮತ್ತು ಟ್ರೋಫಿಗಳೊಂದಿಗೆ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿರುವ ಮಾಜಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾದ ಯಶಸ್ವಿ ನಾಯಕ ಹಾಗೂ ವಿಶ್ವ ಮಟ್ಟದ ಬ್ಯಾಟರ್ ಆಗಿ ಭಾರತೀಯ ಕ್ರಿಕೆಟಿಗೆ ನೀಡಿದ ಅನುಪಮ ಕೊಡುಗೆಗಾಗಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.

ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಂಬೈನ ಪ್ರತಿಭಾನ್ವಿತ ಯುವಕನಿಂದ ಹಿಡಿದು ವಿಶ್ವ ಕ್ರಿಕೆಟ್‌ನ ಅತಿದೊಡ್ಡ ಹೆಸರುಗಳಲ್ಲಿ ಒಬ್ಬರಾಗುವ ರೋಹಿತ್ ಶರ್ಮಾ ಅವರ ಪ್ರಯಾಣವು ಗಮನಾರ್ಹವಾಗಿದೆ. ತಮ್ಮ ಪೀಳಿಗೆಯ ಅತ್ಯುತ್ತಮ ವೈಟ್-ಬಾಲ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿ ಖ್ಯಾತಿಯನ್ನು ಗಳಿಸಿದ್ದಾರೆ.

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನದೊಂದಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ಕ್ರಿಕೆಟ್‌ನಲ್ಲಿ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ಇತ್ತೀಚಿಗೆ ಅವರ ನಾಯಕತ್ವದಲ್ಲಿ ಭಾರತವು ಐಸಿಸಿ ಟಿ 20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಈ ಯಶಸ್ಸಿನ ನಂತರ ಚಾಂಪಿಯನ್ಸ್ ಟ್ರೋಫಿಯನ್ನು ಸಹ ಭಾರತ ಮುಡಿಗೇರಿಸಿಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.