Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು.

ಮ್ಯಾಂಚೆಸ್ಟರ್: ಮಹಿಳಾ ಟಿ-20 ವಿಶ್ವಕಪ್ ಪಂದ್ಯಾವಳಿಯ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಬಾಂಗ್ಲಾದೇಶದ ಪರ ಜುಯಿರಿಯಾ ಫರ್ಡಸ್ 33, ಶೋಭನಾ 22, ನಿಗರ್ ಸುಲ್ತಾನಾ 32, ಶರ್ಮಿನ್ ಅಖ್ತರ್ 10 ರನ್ ಗಳಿಸಿ ಔಟಾದರು.
ಬಾಂಗ್ಲಾ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಕೇವಲ 10 ಎಸೆತಗಳ ಅಂತರದಲ್ಲಿ ಭಾರತೀಯ ಆಟಗಾರ್ತಿಯರು 4 ಕ್ಯಾಚ್‌ಗಳನ್ನು ಕೈಬಿಟ್ಟರು. ಅದರಲ್ಲೂ ಬಾಂಗ್ಲಾದೇಶದ ಆರಂಭಿಕ ಆಟಗಾರ್ತಿ ಫಿರ್ದೌಸ್‌ಗೆ ಮೂರು ಜೀವದಾನಗಳನ್ನು ನೀಡಲಾಯಿತು. ಹೀಗಾಗಿ 33 ರನ್ ಪೇರಿಸಿದರು. ಭಾರತ ಪರ ರಾಧಾ ಯಾದವ್ 3, ಶ್ರೀ ಚರಣಿ 2, ರೇಣುಕಾ ಶರ್ಮಾ ಮತ್ತು ನಂದನಿ ಶರ್ಮಾ ತಲಾ 1 ವಿಕೆಟ್ ಪಡೆದರು.

T20 WWC: 4 ಕ್ಯಾಚ್ ಕೈಚೆಲ್ಲಿ ಮತ್ತೆ ಕಳಪೆ ಫೀಲ್ಡಿಂಗ್, ಹೀನಾಯ ದಾಖಲೆ; 137 ರನ್ ಟಾರ್ಗೆಟ್ ಕೊಟ್ಟ ಬಾಂಗ್ಲಾ, Video!
ಬಾಂಗ್ಲಾದೇಶ ನೀಡಿದ 137 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತದ ಪರ ಸ್ಮೃತಿ ಮಂಧಾನ ಕೇವಲ 8 ರನ್ ಗಳಿಸಿ ಕ್ಯಾಚ್ ನೀಡಿ ನಿರ್ಗಮಿಸಿದರು. ಬಳಿಕ ಅಮೋಘ ಪ್ರದರ್ಶನ ನೀಡಿದ ಶಫಾಲಿ ವರ್ಮಾ 34 ಎಸೆತಗಳಲ್ಲಿ 53 ರನ್ ಗಳಿಸಿದರು.
ಯಸ್ಟಿಕಾ ಭಾಟಿಯಾ 23, ರಿಚಾ ಘೋಷ್ 10, ಜೆಮಿಮಾ ರೋಡ್ರಿಗೇಸ್ 26, ನಾಯಕಿ ಹರ್ಮನ್ ಪ್ರೀತ್ ಕೌರ್ ಔಟಾಗದೆ 13 ಹಾಗೂ ದೀಪ್ತಿ ಶರ್ಮಾ ಅಜೇಯ 5 ರನ್ ಗಳಿಸುವುದರೊಂದಿಗೆ ಭಾರತ ತಂಡ ಇನ್ನೂ 19 ಎಸೆತಗಳು ಬಾಕಿಯಿರುವಂತೆಯೇ 139 ರನ್ ಗಳಿಸಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


